Home Mangalorean News Kannada News ಕೋಟ: ವಾಕಿಂಗ್ ಹೋಗುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಮೃತ್ಯು

ಕೋಟ: ವಾಕಿಂಗ್ ಹೋಗುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಮೃತ್ಯು

Spread the love

ಕೋಟ: ವಾಕಿಂಗ್ ಹೋಗುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಮೃತ್ಯು

ಕೋಟ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಪಾದಚಾರಿ ಮೃತಪಟ್ಟ ಘಟನೆ ಮಂಗಳವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿ 66ರ ಮಾಬುಕಳ ಐರೊಡಿ ಪಂಚಾಯತ್ ಎದುರುಗಡೆ ಸಂಭವಿಸಿದೆ.

ಮೃತ ವ್ಯಕ್ತಿಯು ಸುಮಾರು 35 ವರ್ಷದವನಾಗಿದ್ದು ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ

ಮಂಗಳವಾರ ಬೆಳಗ್ಗಿನ ಜಾವ ವ್ಯಕ್ತಿ ವಾಕಿಂಗ್ ಹೋಗುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದ್ದು ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ. ಕೋಟ ಜೀವನ್ ಮಿತ್ರ ಅಂಬುಲೆನ್ಸ್ ಅವರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬ್ರಹ್ಮಾವರ ಶವಾಗಾರಕ್ಕೆ ಕಳುಹಿಸಿದ್ದಾರೆ.

ಕೋಟ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ವ್ಯಕ್ತಿಯ ಬಗ್ಗೆ ಮತ್ತು ಅಪಘಾತ ನಡೆಸಿ ಪರಾರಿಯಾದ ವಾಹನದ ಮಾಹಿತಿ ಸಂಗ್ರಹಿಸುತ್ತಿದ್ದಾರೆ


Spread the love

Exit mobile version