ಕೋಡಿಕಲ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

Spread the love

ಕೋಡಿಕಲ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಮಂಗಳೂರು: ಮಂಗಳೂರು ನಗರದ ಕೋಡಿಕಲ್ ಪ್ರದೇಶದಲ್ಲಿ ಗಾಂಜಾ ಪೊರೈಸುತ್ತಿದ್ದ ಓರ್ವ ವ್ಯಕ್ತಿಯನ್ನು ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಕಲ್ ಕಟ್ಟೆ ಸಾರ್ವಜನಿಕ ಸ್ಥಳದಲ್ಲಿ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಬಂಧಿಸಿರುತ್ತಾರೆ.

ಬಂಧಿತನ್ನನ್ನು ಕೋಡಿಕಲ್ ನಿವಾಸಿ ಮಣಿಕಂಠ (22) ಎಂದು ಗುರುತಿಸಲಾಗಿದೆ.

ಮಂಗಳವಾರ ಆರೋಪಿ ಮಣಿಕಂಠ ಗಾಂಜಾ ಮಾರಾಟ ಮಾಡಲು ಬಂದಾಗ ವಶಕ್ಕೆ ಪಡೆದಿದ್ದು, ಆರೋಪಿತನಿಂದ ಒಟ್ಟು 75ಗ್ರಾಂ ಗಾಂಜಾ ಹಾಗೂ ನಗದನ್ನು ವಶಪಡಿಸಿಕೊಂಡಿದ್ದು, ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 7650/- ಆಗಿರುತ್ತದೆ. ಉರ್ವ ಠಾಣೆಯಲ್ಲಿ ಎನ್.ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಕೇಂದ್ರ ಉಪವಿಭಾಗದ ರೌಡಿ ನಿಗ್ರಹ ದಳದ ಅಧಿಕಾರಿ ಹಾಗೂ ಸಿಬಂದಿ ಮತ್ತು ಉರ್ವ ಪೊಲೀಸ್ ಠಾಣಾ ಸಿಬಂದಿಯವರು ಕಾರ್ಯಾಚರಣೆಯಲ್ಲಿ ಭಾಗವಹಿಸಿರುತ್ತಾರೆ.


Spread the love