ಕೋಮುದ್ವೇಷ ಪ್ರಕರಣಕ್ಕೆ ಸಂಬಂಧಿಸಿದ ಪ್ರಚೋದನಾತ್ಮಕ ಪೋಸ್ಟ್: ಆರೋಪಿಯ ಬಂಧನ

Spread the love

ಕೋಮುದ್ವೇಷ ಪ್ರಕರಣಕ್ಕೆ ಸಂಬಂಧಿಸಿದ ಪ್ರಚೋದನಾತ್ಮಕ ಪೋಸ್ಟ್: ಆರೋಪಿಯ ಬಂಧನ

ಮಂಗಳೂರು: ಸಾಮಾಜಿಕ ಜಾಲತಾಣ Instagram ನಲ್ಲಿ ಕೋಮುದ್ವೇಷದ ಹಿನ್ನೆಲೆಯ ಕೊಲೆಗೆ ಸಂಬಂಧಿಸಿದಂತೆ ಪ್ರತೀಕಾರಕ್ಕೆ ಪ್ರಚೋದಿಸುವ ಸಂದೇಶವನ್ನು ಪ್ರಕಟಿಸಿದ ಪ್ರಕರಣದಲ್ಲಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

target_boy900 ಎಂಬ ಇನ್‌ಸ್ಟಾಗ್ರಾಮ್ ಖಾತೆಯ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಕೋಮುದ್ವೇಷದ ಘಟನೆಯೊಂದರ ಹಿನ್ನೆಲೆಯಲ್ಲಿ ಪ್ರತೀಕಾರಕ್ಕೆ ಕರೆ ನೀಡುವ ರೀತಿಯ ಸಂದೇಶವನ್ನು ಪ್ರಸಾರ ಮಾಡಲಾಗಿತ್ತು. ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ 08.10.2025 ರಂದು ಅಪರಾಧ ಸಂಖ್ಯೆ 40/2025ರಂತೆ ಕಲಂ 55, 353(2) r/w 103 BNS-2023 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ಮುಂದುವರಿಸಿದ ಪೊಲೀಸರು 08.10.2025 ರಂದು ಕಸಬ ಬೆಂಗ್ರೆ, ಮಂಗಳೂರು ನಿವಾಸಿ ಮಹಮ್ಮದ್ ಮುನಾವರ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments