Home Mangalorean News Kannada News ಕೋವಿಡ್-19 ಸೋಂಕಿನಿಂದ ಮೃತಪಟ್ಟವರ ಶವ ಸಂಸ್ಕಾರಕ್ಕೆ ಅಡ್ಡಿಪಡಿಸಿದರೆ ಕಠಿಣ ಕ್ರಮ – ಡಿಸಿ ಜಗದೀಶ್ ಎಚ್ಚರಿಕೆ

ಕೋವಿಡ್-19 ಸೋಂಕಿನಿಂದ ಮೃತಪಟ್ಟವರ ಶವ ಸಂಸ್ಕಾರಕ್ಕೆ ಅಡ್ಡಿಪಡಿಸಿದರೆ ಕಠಿಣ ಕ್ರಮ – ಡಿಸಿ ಜಗದೀಶ್ ಎಚ್ಚರಿಕೆ

Spread the love

ಕೋವಿಡ್-19 ಸೋಂಕಿನಿಂದ ಮೃತಪಟ್ಟವರ ಶವ ಸಂಸ್ಕಾರಕ್ಕೆ ಅಡ್ಡಿಪಡಿಸಿದರೆ ಕಠಿಣ ಕ್ರಮ – ಡಿಸಿ ಜಗದೀಶ್ ಎಚ್ಚರಿಕೆ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನಿಂದ ಮೃತಪಟ್ಟ ವೇಳೆ ಶವ ಸಂಸ್ಕಾರಕ್ಕೆ ಯಾವುದೇ ರೀತಿಯಿಂದ ಪ್ರತಿರೋಧ ಒಡ್ಡಬಾರದಾಗಿ ಎಚ್ಚರಿಕೆ ನೀಡಲಾಗಿದೆ. ಯಾರೇ ಆಗಲಿ ಪ್ರತಿರೋಧ ಒಡ್ಡಿದ ದಲ್ಲಿ ಕಾನೂನಿನಂತೆ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಎಚ್ಚರಿಕೆ ನೀಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವುದು ತಮಗೆಲ್ಲ ತಿಳಿದ ವಿಷಯ. ಅದೇ ರೀತಿ ಸೋಂಕಿತರ ಸಾವಿನ ಸಂಖ್ಯೆ ಸಹ ಗಣನೀಯವಾಗಿ ಹೆಚ್ಚಾಗುತ್ತಿರುವುದು ವಾಸ್ತವಾಂಶ ವಾಗಿದೆ. ನಾಗರಿಕರು ಮೃತ ಪಟ್ಟಾಗ ಗೌರವಯುತ ಸಂಸ್ಕಾರ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಕೋವಿಡ್-19 ಸೋಂಕಿತರು ಮೃತಪಟ್ಟಲ್ಲಿ ಅವರ ಶವ ಸಂಸ್ಕಾರಕ್ಕೆ ಸರ್ಕಾರದಿಂದ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗಿದೆ ಅದರಂತೆ ಶವ ಸಂಸ್ಕಾರ ನಡೆಸಲಾಗುತ್ತಿದೆ.

ಆದರೆ ಇತ್ತೀಚಿನ ದಿನಗಳಲ್ಲಿ ಕೋವಿಡ್-19 ಸೋಂಕಿತರ ಹಾಗೂ ಇತರ ಪ್ರಕರಣಗಳಲ್ಲಿ ಶವಸಂಸ್ಕಾರಕ್ಕೆ ಸಾರ್ವಜನಿಕ ಪ್ರತಿರೋಧ ಓಡಾಡುತ್ತಿರುವುದು ಕಂಡು ಬರುತ್ತಿದ್ದು, ಇದು ವಿಷಾದನೀಯ ಬೆಳವಣಿಗೆ ಆಗಿದೆ. ಕೋವಿಡ್-19 ಸೋಂಕಿತರ ಶವ ಸಂಸ್ಕಾರ ಸರಕಾರದ ನಿರ್ದೇಶನ ಗಳಂತೆ ನಡೆಸಲಾಗುತ್ತಿದೆ, ಜನರು ಯಾವುದೇ ರೀತಿಯಿಂದ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಸಾರ್ವಜನಿಕರಿಗೆ ತಿಳಿಯಪಡಿಸುತ್ತದೆ, ಶವ ಸಂಸ್ಕಾರಕ್ಕೆ ಯಾವುದೇ ರೀತಿಯಿಂದ ಪ್ರತಿರೋಧ ಒಡ್ಡಬಾರದಾಗಿ ಎಚ್ಚರಿಕೆ ನೀಡಲಾಗಿದೆ. ಯಾರೇ ಆಗಲಿ ಪ್ರತಿರೋಧ ಒಡ್ಡಿದ ದಲ್ಲಿ ಕಾನೂನಿನಂತೆ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.


Spread the love

Exit mobile version