ಕೌಟುಂಬಿಕ ದೌರ್ಜನ್ಯ: ಕಟ್ಟುನಿಟ್ಟಿನ ಕ್ರಮಕ್ಕೆ ತಹಶೀಲ್ದಾರ್ ಸೂಚನೆ

Spread the love

ಕೌಟುಂಬಿಕ ದೌರ್ಜನ್ಯ: ಕಟ್ಟುನಿಟ್ಟಿನ ಕ್ರಮಕ್ಕೆ ತಹಶೀಲ್ದಾರ್ ಸೂಚನೆ

ಮಂಗಳೂರು:  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅನುμÁ್ಠನಗೊಂಡಿರುವ ತಾಲೂಕು ಮಟ್ಟದ ವಿವಿಧ ಯೋಜನೆಗಳ ಸಮಿತಿ ಸಭೆಯು ಬುಧವಾರ ಮಂಗಳೂರು ತಹಶೀಲ್ದಾರ್ ಟಿ.ರಮೇಶ್ ಬಾಬು ಅಧ್ಯಕ್ಷತೆಯಲ್ಲಿ ತಾಲೂಕು ಕಚೇರಿಯಲ್ಲಿ ನಡೆಯಿತು.

ಅವರು ಮಾದಕ ವಸ್ತು ಸೇವನೆ ಮತ್ತು ಮಾರಾಟ ನಿಷೇಧ ಯೋಜನಾ ಸಮಿತಿ, ಟ್ರಾನ್ಸ್‍ಜೆಂಡರ್ ತಾಲೂಕು ಮಟ್ಟದ ಸಮನ್ವಯ ಸಮಿತಿ, ಭಾಗ್ಯಲಕ್ಷ್ಮಿ ಯೋಜನೆಯ ಕಾರ್ಯಪಡೆ ಸಮಿತಿ, ಕೌಟುಂಬಿಕ ದೌರ್ಜನ್ಯ ತಡೆ ಕಾಯಿದೆ ಸಮಿತಿ, ಮಹಿಳೆಯರ ಮತ್ತು ಮಕ್ಕಳ ಮಾರಾಟ ಹಾಗೂ ಸಾಗಾಟ ತಡೆ ಸಮಿತಿ, ಬಾಲ್ಯವಿವಾಹ ನಿಷೇಧ ಸಮಿತಿ, ಮಕ್ಕಳ ರಕ್ಷಣಾ ಸಮಿತಿಯ ಪ್ರಗತಿಯನ್ನು ಪರಿಶೀಲಿಸಿದರು.

ಮಹಿಳೆಯರ ಮತ್ತು ಮಕ್ಕಳ ಮಾರಾಟ ಪ್ರಕರಣಗಳು ಕಂಡುಬಂದಲ್ಲಿ ಇಂತಹ ಜಾಲವನ್ನು ಪತ್ತೆಹಚ್ಚಿ ಮಕ್ಕಳನ್ನು ಮತ್ತು ಮಹಿಳೆಯರನ್ನು ರಕ್ಷಿಸಬೇಕು. ಮಾದಕ ವಸ್ತು ಸೇವನೆ ತಡೆಯಲು ಜನರಿಗೆ ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು. ಕೌಟುಂಬಿಕ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು. ಇಂತಹ ಪ್ರಕರಣಗಳು ಕಂಡುಬಂದಲ್ಲಿ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಮಂಗಳೂರು ತಹಶೀಲ್ದಾರ್ ಟಿ.ರಮೇಶ್ ಬಾಬು ಹೇಳಿದರು.

ಕೌಟುಂಬಿಕ ದೌರ್ಜನ್ಯ ತಡೆ ಕಾಯಿದೆಯಡಿ ಏಪ್ರಿಲ್ 2025 ರಿಂದ ಫೆಬ್ರವರಿ 2026 ರವರೆಗೆ 29 ಪ್ರಕರಣಗಳು ದಾಖಲಾಗಿರುತ್ತದೆ. ಮಂಗಳೂರು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರ ವಲಯ ಸಭೆಗಳಲ್ಲಿ ಹಾಗೂ ಅಂಗನವಾಡಿಗಳಲ್ಲಿ ತಾಯಂದಿರ ಸಭೆ ಹಾಗೂ ಸ್ತ್ರೀ ಶಕ್ತಿ ಸಭೆಗಳಲ್ಲಿ ಸೇರಿದ ಮಹಿಳೆಯರು ಹಾಗೂ ಸೇರಿದ ಜನರಿಗೆ ಮಾದಕ ವಸ್ತು ಸೇವನೆ ಮತ್ತು ಮಾರಾಟ ನಿμÉೀಧದ ಬಗ್ಗೆ ತಿಳಿಸಲಾಗಿರುತ್ತದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಮಂಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹೊಳ್ಳ, ತಾಲೂಕು ಆರೋಗ್ಯಾಧಿಕಾರಿ ಡಾ.ಸುಜಯ್ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.


Spread the love
Subscribe
Notify of

0 Comments
Inline Feedbacks
View all comments