ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

Four Sports, a lot of balls and stuff
Spread the love

ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಮ0ಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖಾ ವತಿಯಿಂದ 2017-18 ನೇ ಸಾಲಿನ ಕ್ರಿಯಾಯೋಜನೆಯಡಿ, ಸರಕಾರದಿಂದ ಮತ್ತು ಸರಕಾರದಿಂದ ಮಾನ್ಯತೆ ಪಡೆದ ನೋಂದಾಯಿತ ಕ್ರೀಡಾಸಂಸ್ಥೆಗಳಿಂದ ನಡೆಸಲ್ಪಡುವ ಕ್ರೀಡಾಕೂಟಗಳಲ್ಲಿ ಅಂತರಾಷ್ಟ್ರೀಯ ಮತ್ತು ರಾಷ್ಟ್ರಮಟ್ಟದ ಒಲಿಂಪಿಕ್ ಮಾನ್ಯತೆ ಪಡೆದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅಥ್ಲೆಟಿಕ್, ಆರ್ಚರಿ, ಬ್ಯಾಡ್ಮಿಂಟನ್, ಬಾಸ್ಕೆಟ್‍ಬಾಲ್, ಬಾಕ್ಸಿಂಗ್ ,ಸೈಕ್ಲಿಂಗ್, ಫುಟ್‍ಬಾಲ್, ಜಿಮ್ನಾಸ್ಟಿಕ್, ಹಾಕಿ, ಹ್ಯಾಂಡ್‍ಬಾಲ್, ಜುಡೋ, ಶೂಟಿಂಗ್, ರೋಯಿಂಗ್, ಈಜು (ಡೈವಿಂಗ್ ಸೇರಿ), ಲಾನ್‍ಟೆನ್ನಿಸ್, ಟೇಕ್ವಾಂಡೋ, ಟ್ರಯತ್ಲಾನ್, ವಾಲಿಬಾಲ್, ಭಾರ ಎತ್ತುವಿಕೆ, ಫೆನ್ಸಿಂಗ್, ಈಕ್ವೆಸ್ಟ್ರಿಯನ್, ವಾಟರ್‍ಸ್ಪೋರ್ಟ್ಸ, ರಗ್ಬಿ, ಕುಸ್ತಿ, ಗಾಲ್ಫ್ ಮುಂತಾದ ಕ್ರೀಡೆಗಳಲ್ಲಿ ರಾಷ್ಟ್ರ ಮತ್ತು ರಾಜ್ಯವನ್ನು ಪ್ರತಿನಿಧಿಸಿದ ಜಿಲ್ಲೆಯ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನವನ್ನು ನೀಡಲಾಗುವುದು. ರಾಷ್ಟ್ರಮಟ್ಟದಲ್ಲಿ 25 ಮಂದಿ ಕ್ರೀಡಾಪಟುಗಳಿಗೆ ಹಾಗೂ 5 ಮಂದಿ ವಿಶೇಷ ಸಾಮಥ್ರ್ಯದ ಕ್ರೀಡಾಪಟುಗಳಿಗೆ ತಲಾ ರೂಪಾಯಿ 5,000/- ಮತ್ತು ಅಂತರಾಷ್ಟ್ರೀಯ ಮಟ್ಟದ 5 ಮಂದಿ ಕ್ರೀಡಾಪಟುಗಳು ಹಾಗೂ ಒಬ್ಬರು ವಿಶೇಷ ಸಾಮಥ್ರ್ಯದ ಕ್ರೀಡಾಪಟುವಿಗೆ ತಲಾ ರೂಪಾಯಿ 10,000/- ರಂತೆ ಪ್ರೋತ್ಸಾಹಧನವನ್ನು ನೀಡಲಾಗುವುದು.

ಅರ್ಹ ಕ್ರೀಡಾಪಟುಗಳು 01-04-2016 ರಿಂದ 31-03-2017ರ ಅವಧಿಯಲ್ಲಿ ರಾಷ್ಟ್ರ ಮಟ್ಟದಲ್ಲಿ ಪದಕ ವಿಜೇತ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ಜಿಲ್ಲೆಯ ಕ್ರೀಡಾಪಟುಗಳು ಸೂಕ್ತ ದಾಖಲೆಗಳೊಂದಿಗೆ ಅಕ್ಟೋಬರ್ 19 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅಂತರಾಷ್ಟ್ರೀಯ ಮಟ್ಟದ ಮಾಸ್ಟರ್ಸ್ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ಅವಕಾಶ ಇರುವುದಿಲ್ಲ. ರಾಷ್ಟ್ರಮಟ್ಟದ ವಿಭಾಗದಲ್ಲಿ ಅರ್ಜಿ ಸಲ್ಲಿಸುವ ಕ್ರೀಡಾಪಟುಗಳು 01-01-1997 ರ ನಂತರ ಜನಿಸಿದವರಾಗಿರಬೇಕು.

ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 0824-2451264 ಅಥವಾ 9480886553 ಸಂಖ್ಯೆಗೆ ಕರೆಮಾಡಿ ವಿವರವನ್ನು ಪಡೆಯಬಹುದಾಗಿದೆ ಎಂದು ಉಪ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ, ಮಂಗಳೂರು ಇವರ ಪ್ರಕಟನೆ ತಿಳಿಸಿದೆ.


Spread the love