ಕ್ವಾರಂಟೈನ್ ಕೇಂದ್ರದ ಸುತ್ತ ಬಿಗಿ ಭದ್ರತೆ- ಹೊರಗಡೆ ತೆರಳದಂತೆ ಸೂಚನೆ

Spread the love

ಕ್ವಾರಂಟೈನ್ ಕೇಂದ್ರದ ಸುತ್ತ ಬಿಗಿ ಭದ್ರತೆ- ಹೊರಗಡೆ ತೆರಳದಂತೆ ಸೂಚನೆ

ಮಂಗಳೂರು: ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದವರನ್ನು ಕ್ವಾರಂಟೈನ್ನಲ್ಲಿ ಇರಿಸಲಾಗಿದ್ದು, ಅವರ ಬಗ್ಗೆ ಜಿಲ್ಲಾಡಳಿತ ಹೆಚ್ಚಿನ ಎಚ್ಚರಿಕೆ ವಹಿಸುತ್ತಿದೆ.

ಮಂಗಳೂರಿನ ವಿವಿಧ ಹೋಟೇಲ್ ಸೇರಿದಂತೆ 10 ಕ್ವಾರಂಟೈನ್ ಕೇಂದ್ರಗಳಲ್ಲಿ ಅವರಿಗೆ ಅವಕಾಶ ಕಲ್ಪಿಸಲಾಗಿದ್ದು, ಅವರು ಕ್ವಾರಂಟೈನ್ ಕೇಂದ್ರದಿಂದ ಹೊರಬರದಂತೆ ಸೂಚನೆ ನೀಡಲಾಗಿದೆ.

ಪ್ರತಿ ಕ್ವಾರಂಟೈನ್ ಕೇಂದ್ರಕ್ಕೆ ಒಬ್ಬ ನೋಡಲ್ ಅಧಿಕಾರಿ ಹಾಗೂ ಕೇಂದ್ರದ ಸಿಬ್ಬಂದಿಗೆ ತರಬೇತಿ ನೀಡಿ ನಿಯಮಗಳನ್ನು ಪಾಲಿಸುವಂತೆ ಕಟ್ಟುನಿಟ್ಟಿನ ಸೂಚನೆಯನ್ನು ಜಿಲ್ಲಾಡಳಿತ ನೀಡಿದೆ.


Spread the love