Home Mangalorean News Kannada News ಖ್ಯಾತ ಯುರೋಲಜಿಸ್ಟ್ ಡಾ.ಲಕ್ಷ್ಮಣ ಪ್ರಭು ನಿಧನ

ಖ್ಯಾತ ಯುರೋಲಜಿಸ್ಟ್ ಡಾ.ಲಕ್ಷ್ಮಣ ಪ್ರಭು ನಿಧನ

Spread the love

ಖ್ಯಾತ ಯುರೋಲಜಿಸ್ಟ್ ಡಾ.ಲಕ್ಷ್ಮಣ ಪ್ರಭು ನಿಧನ
 

ಮಂಗಳೂರು: ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಖ್ಯಾತ ಮೂತ್ರಶಾಸ್ತ್ರಜ್ಞ ಡಾ.ಜಿ.ಜಿ.ಲಕ್ಷ್ಮಣ ಪ್ರಭು(61) ಇಂದು ಬೆಳಗ್ಗೆ ನಿಧನ ಹೊಂದಿದರು.

ವಾರದ ಹಿಂದೆ ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ವೇಳೆ ಡಾ.ಜಿ.ಜಿ.ಲಕ್ಷ್ಮಣ ಪ್ರಭು ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದರು.

ಆ ಬಳಿಕ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬೆಳಗ್ಗೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.


Spread the love

Exit mobile version