ಗಣೇಶ ಚತುರ್ಥಿ ಆಚರಣೆಗೆ ರಾಜ್ಯ ಸರಕಾರದಿಂದ ಮಾರ್ಗಸೂಚಿ ಪ್ರಕಟ

Spread the love

ಗಣೇಶ ಚತುರ್ಥಿ ಆಚರಣೆಗೆ ರಾಜ್ಯ ಸರಕಾರದಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು: ದೇಶದಾದ್ಯಂತ ಅಗೋಸ್ತ್ 22 ರಂದು ಗಣೇಶ ಚತುರ್ಥಿ ಆಚರಣೆ ನಡೆಯಲಿದ್ದು, ಈ ಹಬ್ಬವನ್ನು ರಾಜ್ಯದಲ್ಲಿ ಪಾರಂಪರಿಕವಾಗಿ ಪ್ರತಿ ವರ್ಷವೂ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಪ್ರಸ್ತುತ ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗವು ಹರಡಿರುವುದರಿಂದ ಶ್ರೀ ಗಣೇಶೋತ್ಸವದ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ಆಚರಿಸಬೇಕಾಗಿದ್ದು ಶ್ರೀ ಗಣೇಶೋತ್ಸವವನ್ನು ಆಚರಿಸುವ ಸಂಬಂಧವಾಗಿ ರಾಜ್ಯ ಸರಕಾರ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಗಣೇಶೋತ್ಸವ ಆಚರಿಸುವ ಸಂಬಂಧ ಮಾರ್ಗಸೂಚಿಗಳು:

1. ಶ್ರೀ ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ದೇವಸ್ಥಾನದೊಳಗೆ ಅಥವಾ ತಮ್ಮ ಮನೆಗಳಲ್ಲಿಯೇ ಆಚರಿಸುವುದು,

2. ಶ್ರೀ ಗಣೇಶೋತ್ಸವ ಹಬ್ಬವನ್ನು ಸಾರ್ವಜನಿಕ ಮಳ.(ಉದಾ: ರಸ್ತೆ. ಗಲಿ, ಓಣಿಮೈದಾನ ಇತ್ಯಾದಿಗಳಲ್ಲಿ ಶ್ರೀ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಬಾರದು.

3, ಯಾವುದೇ ಕಾರಣಕ್ಕೂ ಸಾರ್ವಜನಿಕ ನದಿ ಕೆರೆ ಕೊಳ, ಬಾವಿ ಮತ್ತು ಕಲ್ಯಾಣಿಗಳಲ್ಲಿ ಶ್ರೀ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡತಕ್ಕದ್ದಲ್ಲ

4. ಶ್ರೀ ಗಣೇಶೋತ್ಸವದಲ್ಲಿ ಶ್ರೀ ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಿ ಅಥವಾ ಯಾವುದೇ ಸಂದರ್ಭಗಳಲ್ಲಿ ಯಾವುದೇ ರೀತಿಯ ಮೆರವಣಿಗೆಯನ್ನು ಹೊರಡಿಸಿ ತಕ್ಕದ್ದಲ್ಲ ಮಾಡತಕ್ಕದ್ದಲ್ಲ.ಇದನ್ನು ಸಂಪೂರ್ಣವಾಗಿ ನಿರ್ಬಂಧಿಸಿದೆ

5, ಮನೆಯಲ್ಲಿ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಗಳನ್ನು ಆವರಣದಲ್ಲಿಯೇ ವಿಸರ್ಜನೆ ಮಾಡುವುದು.

6, ಶ್ರೀ ಗಣೇಶ ಹಬ್ಬ ಆಚರಿಸುವ ದೇವಸ್ಥಾನಗಳಲ್ಲಿ ದಿನನಿತ್ಯ ಸ್ಯಾನಿಟೈಸೇಷನ್ ಮಾಡುವುದು ಹಾಗೂ ಸಾರ್ವಜನಿಕ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಮಿನಿಂಗ್ ವ್ಯವಸ್ಥೆಯನ್ನು ಕಲ್ಪಿಸುವುದರ ಜೊತೆಗೆ ದರ್ಶನಕ್ಕಾಗಿ ಬರುವ ಭಕ್ತರಿಗೆ ಕನಿಷ್ಠ 06 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳತಕ್ಕದ್ದು, ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳ ಮತ್ತು ಸಾರ್ವಜನಿಕರು ಕಡ್ಡಾಯವಾಗಿ ಮುಖಗವಸು ಧರಿಸಿರತಕ್ಕದ್ದು.

7, ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರ ಹೊರಡಿಸಿದ ಮಾರ್ಗಸೂಚಿ ಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು, ಅಲ್ಲದೆ, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೆ ಇಲಾಖೆಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು,

8, ಶ್ರೀ ಗಣೇಶೋತ್ಸವ ಆಚರಣೆ ಕಾಲಕ್ಕೆ ಸಂಧರ್ಭಕ್ಕನುಗುಣವಾಗಿ ಸರ್ಕಾರ, /ಪ್ರಾಧಿಕಾರಗಳಿಂದ ಹೊರಡಿಸಲಾಗುವ ಎಲ್ಲ ಆದೇಶ | ನಿರ್ದೇಶನ ಹಾಗೂ ಸೂಚನೆಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು.

9. ಹಬ್ಬ-ಹರಿದಿನಗಳು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯಗಳು ಉಂಟಾಗಲು ಪೂರಕವಾಗಿರುವುದರಿಂದ ಶ್ರೀ ಗಣೇಶೋತ್ಸವ ಹಬ್ಬವನ್ನು ಅದೇ ರೀತಿಯಿಂದ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬರದಂತೆ ಕಾಪಾಡುವುದು,

10.ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ | ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ’ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188 ರ ಅಡಿಯ ಶಿಸ್ತಿನ/ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರ ಕಾನೂ ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು.

ಈ ಮಾರ್ಗಸೂಚಿಗಳನ್ನು ಮಹಾನಗರ ಪಾಲಿಕೆಗಳ ಆಯುಕ್ತರು, ಪೊಲೀಸ್ ಆಯುಕ್ತರು, ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಇತರೆ ಇಲಾಖಾ ಮುಖ್ಯಸ್ಥರುಗಳು ಹಾಗೂ ಇಲಾಖಾ ಪ್ರಾಧಿಕಾರಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಸರಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಆದೇಶ ನೀಡಿದ್ದಾರೆ.


Spread the love