ಗಲ್ಫ್ ರಾಷ್ಟ್ರಗಳಿಗೆ ತೆರಳುವ 4, ಮಂಗಳೂರಿಗೆ ಆಗಮಿಸುವ 2 ಅಂತರ್‌ರಾಷ್ಟ್ರೀಯ ವಿಮಾನಗಳ ಹಾರಾಟ ರದ್ದು

Spread the love

ಗಲ್ಫ್ ರಾಷ್ಟ್ರಗಳಿಗೆ ತೆರಳುವ 4, ಮಂಗಳೂರಿಗೆ ಆಗಮಿಸುವ 2 ಅಂತರ್‌ರಾಷ್ಟ್ರೀಯ ವಿಮಾನಗಳ ಹಾರಾಟ ರದ್ದು

ಮಂಗಳೂರು : ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯ ನಡುವೆ ಖತರ್ ನಲ್ಲಿರುವ ಅಮೆರಿಕದ ವಾಯುನೆಲೆಯ ಮೇಲೆ ದಾಳಿ ನಡೆದಿದ್ದು, ಈ ಘಟನೆಯ ಬಳಿಕ ಮಧ್ಯಪ್ರಾಚ್ಯದಲ್ಲಿ ಉಂಟಾಗಿದ್ದ ಉದ್ವಿಗ್ನತೆಯ ಕಾರಣದಿಂದ ಅಲ್ಲಿನ ವಾಯುಪ್ರದೇಶವನ್ನು ಮುಚ್ಚಲಾಗಿತ್ತು.

ಇದರಿಂದಾಗಿ ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗಲ್ಫ್ ರಾಷ್ಟ್ರಗಳಿಗೆ ತೆರಳುವ ಮತ್ತು ಅಲ್ಲಿಂದ ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಕೆಲವು ವಿಮಾನಗಳ ಹಾರಾಟ ಮಂಗಳವಾರ ರದ್ದುಗೊಂಡಿದೆ.

ಮಂಗಳೂರಿಗೆ ಆಗಮಿಸಬೇಕಿದ್ದ ಇಂಡಿಗೋ 6ಇ 1437(ಅಬುಧಾಬಿ-ಮಂಗಳೂರು), ಇಂಡಿಗೋ 6ಇ 1468(ದುಬೈ -ಮಂಗಳೂರು), ಏರ್‌ಇಂಡಿಯಾ ಎಕ್ಸ್‌ಪ್ರೆಸ್ ಐಎಕ್ಸ್ 832(ದುಬೈ- ಮಂಗಳೂರು), ಏರ್ ಇಂಡಿಯಾ ಎಕ್ಸ್‌ಪ್ರೆಸ್ ಐಎಕ್ಸ್ 886(ದಮಾಮ್-ಮಂಗಳೂರು) ಅಂತರ್‌ರಾಷ್ಟ್ರೀಯ ವಿಮಾನಗಳ ಹಾರಾಟ ರದ್ದಾಗಿದೆ. ಮಂಗಳೂರಿನಿಂದ ಹಾರಾಟ ನಡೆಸುವ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಐಎಕ್ಸ್ ಮಂಗಳೂರು -ದಮಾಮ್ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಐಎಕ್ಸ್ ಮಂಗಳೂರು -ದುಬೈ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಐಎಕ್ಸ್ 832(ಮಂಗಳೂರು-ದುಬೈ) ವಿಮಾನಗಳ ಹಾರಾಟ ರದ್ದಾಗಿದೆ.

ಇಂಡಿಗೋ 6ಇ 653( ಮಂಗಳೂರು-ಮುಂಬೈ ) ದೇಶಿಯ ವಿಮಾನದ ಸಂಚಾರವನ್ನು ನಿರ್ವಹಣೆಯ ಕಾರಣದಿಂದಾಗಿ ರದ್ದುಗೊಳಿಸಲಾಗಿದೆ. ಸೋಮವಾರ ರಾತ್ರಿ ಮಂಗಳೂರಿನಿಂದ ಗಲ್ಫ್ ರಾಷ್ಟ್ರಗಳಿಗೆ ತೆರಳುವ ವಿಮಾನಗಳ ಕಾರ್ಯಾಚರಣೆಗೆ ಅಡ್ಡಿ ಉಂಟಾಗಿತ್ತು. ದಮಾಮ್‌ಗೆ ಹೋಗುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವನ್ನು ಮಸ್ಕತ್‌ಗೆ ಕಳುಹಿಸಲಾಗಿತ್ತು. ಅಬುಧಾಬಿಗೆ ತೆರಳುತ್ತಿದ್ದ ಇಂಡಿಗೋ ವಿಮಾನವನ್ನು ಮುಂಬೈನಲ್ಲಿ ಇಳಿಸಲಾಗಿತ್ತು.ಈ ಎರಡೂ ವಿಮಾನಗಳು ಇಂದು ಮಂಗಳೂರಿಗೆ ವಾಪಸಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.


Spread the love
Subscribe
Notify of

0 Comments
Inline Feedbacks
View all comments