ಗಾಂಜಾ ಪೊರೈಸುತ್ತಿದ್ದ ವ್ಯಕ್ತಿಯ ಬಂಧನ

Spread the love

ಗಾಂಜಾ ಪೊರೈಸುತ್ತಿದ್ದ ವ್ಯಕ್ತಿಯ ಬಂಧನ

ಮಂಗಳೂರು: ನಗರದ ವಿವಿಧ ಕಡೆ ವಿದ್ಯಾರ್ಥಿಗಳಿಗೆ ಹಾಗೂ ಇತರರಿಗೆ ಗಾಂಜಾ ಪೊರೈಸುತ್ತಿದ್ದ ವ್ಯಕ್ತಿಯನ್ನು ಉರ್ವ ಪೋಲಿಸ್ ಠಾಣಾ ವ್ಯಾಪ್ತಿಯ ಕೋಡಿಕಲ್ 10 ಬಿ ಕ್ರಾಸ್ ಬಳಿ ಖಚಿತ ಮಾಹಿತಿ ಮೇರೆಗೆ ಮಂಗಳೂರು ಕೇಂದ್ರ ಉಪವಿಭಾಗದ ರೌಡಿ ನಿಗ್ರಹ ದಳದ ಪೊಲೀಸರು ಹಾಗೂ ಉರ್ವ ಠಾಣ ಪೋಲಿಸರು ಬಂಧಿಸಿದ್ದಾರೆ.

ಬಂಧಿತನ್ನನ್ನು ಗುರುಪುರ ಕೈಕಂಬ ನಿವಾಸಿ ಮಹಮ್ಮದ್ ಶಾಕೀರ್ (23) ಎಂದು ಗುರುತಿಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ಸೋಮವಾರ ಕಾರ್ಯಾಚರಣೆ ನಡೆಸಿದ ಪೊಲೀಸರು ಗಾಂಜಾ ಮಾರಾಟ ಮಾಡಲು ಬಂದಾಗ ವಶಕ್ಕೆ ಪಡೆದಿದ್ದು, ಆರೋಪಿತನಿಂದ ಒಟ್ಟು 1 ಕೆಜಿ 80ಗ್ರಾಂ ಗಾಂಜಾ, ಎರಡು ಮೊಬೈಲ್ ಫೋನ್, ಬಜಾಜ್ ಪಲ್ಸರ್ ಬೈಕ್ ಮತ್ತು ನಗದನ್ನು ವಶಪಡಿಸಿಕೊಂಡಿದ್ದು, ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 1,19,450 ಆಗಿದೆ.

ಉರ್ವ ಠಾಣೆಯಲ್ಲಿ ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.


Spread the love