ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರ ಬಂಧನ – 810 ಗ್ರಾಂ ಗಾಂಜಾ ವಶ

Spread the love

ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರ ಬಂಧನ 810 ಗ್ರಾಂ ಗಾಂಜಾ ವಶ

ಬಂಟ್ವಾಳ: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ವಶಕ್ಕೆ ಪಡೆದು, ಒಟ್ಟು 810 ಗ್ರಾಂ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಪೊಲೀಸರು ನೀಡಿದ ಮಾಹಿತಿಯಂತೆ, ದಿನಾಂಕ 13-12-2025 ರಂದು ಸಂಜೆ, ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಹನಮನಗರ ಪ್ರದೇಶದಲ್ಲಿ, ರಾಷ್ಟ್ರೀಯ ಹೆದ್ದಾರಿ ಸಮೀಪ ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡಲು ಕೆಲವರು ತಯಾರಿ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಮಾಹಿತಿಯ ಆಧಾರದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಮಂಜುನಾಥ ಟಿ. (ಕಾ & ಸು) ಅವರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.

ಪರಿಶೀಲನೆಯ ವೇಳೆ, ರಾಷ್ಟ್ರೀಯ ಹೆದ್ದಾರಿಯ ಪಕ್ಕದ ನಿರ್ಜನ ಪ್ರದೇಶದಲ್ಲಿ KA-19-MN-3664 ನೋಂದಣಿ ಸಂಖ್ಯೆಯ ಕಾರು ಹಾಗೂ KA-19-AE-0166 ನೋಂದಣಿ ಸಂಖ್ಯೆಯ ಆಟೋ ರಿಕ್ಷಾ ಬಳಿ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದವಾಗಿ ನಿಂತಿರುವುದು ಕಂಡುಬಂದಿತು. ಅವರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಬಂಟ್ವಾಳ ತುಂಬೆ ನಿವಾಸಿ ಸಮೀರ್ (31) ಮತ್ತು ಬಂಟ್ವಾಳ ಗೂಡಿನ ಬಳಿ ನಿವಾಸಿ ಮೊಹಮ್ಮದ್ ಅಸೀಫ್ (35) ಎಂದು ಗುರುತಿಸಲಾಯಿತು.

ವಿಚಾರಣೆ ವೇಳೆ, ಹೆಚ್ಚು ಹಣ ಸಂಪಾದಿಸುವ ಉದ್ದೇಶದಿಂದ ನಿಷೇಧಿತ ಮಾದಕ ವಸ್ತುವಾದ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ತಪಾಸಣೆ ನಡೆಸಿದಾಗ, ಕಾರಿನಲ್ಲಿ 450 ಗ್ರಾಂ ಗಾಂಜಾ ಹಾಗೂ ಆಟೋ ರಿಕ್ಷಾದಲ್ಲಿ 360 ಗ್ರಾಂ ಗಾಂಜಾ ಪತ್ತೆಯಾಗಿದೆ.

ಮುಂದಿನ ಕಾನೂನು ಕ್ರಮಕ್ಕಾಗಿ ಎರಡು ವಾಹನಗಳನ್ನು ಹಾಗೂ ಒಟ್ಟು 810 ಗ್ರಾಂ ಗಾಂಜಾವನ್ನು ಸ್ವಾಧೀನಪಡಿಸಿಕೊಂಡಿದ್ದು, ಆರೋಪಿಗಳ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 183/2025, ಕಲಂ 8(C), 20(B)(ii)(a) ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.


Spread the love
Subscribe
Notify of

0 Comments
Inline Feedbacks
View all comments