ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

Spread the love

ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಮಂಗಳೂರು: ಕೊಣಾಜೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೋಲಿಸರು ಬಂಧಿಸಿದ್ದಾರೆ.

ಬಂಧಿತರನ್ನು ಮಹಮ್ಮದ್ ಅಜೀಜ್ ಎಂದು ಗುರುತಿಸಲಾಗಿದೆ.

ಜುಲೈ 12 ರಂದು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕು ನರಿಂಗಾನ ಗ್ರಾಮದ ಕಲ್ಲರಕೋಡಿ ಕ್ರಾಸ್ ಎಂಬಲ್ಲಿ ಗಾಂಜಾ ಮಾರಾಟ ಮಾಡುತ್ತಿರುವುದಾಗಿ ಮಾಹಿತಿ ದೊರೆತಂತೆ ಧಾಳಿ ನಡೆಸಿ ಮಹಮ್ಮದ್ ಅಜೀಜ್ ಎಂಬವನ್ನು ವಶಕ್ಕೆ ಪಡೆದುಕೊಂಡು ಈತನ ಕೈಯಲ್ಲಿದ್ದು, 1ಕೆಜಿ 300 ಗ್ರಾಂ ತೂಕದ ಗಾಂಜಾವನ್ನು ಹಾಗೂ ನಗದು ಹಣ 22,030, ಮೊಬೈಲ್ ಹ್ಯಾಂಡ್ ಸೆಟ್ ಸಾಗಾಟ ಮಾಡಲು ಬಳಸಿದ ಸ್ಕೂಟರನ್ನು ವಶಪಡಿಸಿಕೊಳ್ಳಲಾಗಿದೆ.

ವಶಪಡಿಸಿಕೊಂಡ ಸೊತ್ತಿನ ಮೌಲ್ಯ 80000 ಆಗಬಹುದು. ಆರೋಪಿಯು ಕೋಲಾರದಿಂದ ಗಾಂಜಾ ತಂಡು ಮಾರಾಟ ಮಾಡುತ್ತಿರುವುದು ತನಿಖೆಯಿಂದ ತಿಳಿದು ಬಂದಿದ್ದು, ಆರೋಪಿಯ ವಿರುದ್ದ ಮಂಗಳೂರು ನಗರದಲ್ಲಿ ಈಗಾಗಲೇ ಗಾಂಜಾ ಮಾರಾಟದ 4 ಪ್ರಕರಣಗಳು ದಾಖಲಾಗಿದ್ದು, ತಲೆ ಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ತಂಡ ರಚಿಸಲಾಗಿದೆ.


Spread the love