ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ
ಮಂಗಳೂರು: ನಗರದ ಇಕೊನಾಮಿಕ್ & ನಾರ್ಕೊಟಿಕ್ಸ್ ಕ್ರೈಂ ಪೋಲಿಸ್ ಠಾಣಾ ನಿರೀಕ್ಷಕರು ಮತ್ತು ಸಿಬಂಧಿಗಳು ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಬಂಧಿತನನ್ನು ಬೆಳುವಾಯಿ ನಿವಾಸಿ ಶರತ್ ಆರ್ (23) ಎಂದು ಗುರುತಿಸಲಾಗಿದೆ.
ಮಂಗಳೂರು ನಗರದ ಇಕೊನಾಮಿಕ್ & ನಾರ್ಕೋಟಿಕ್ಸ್ ಕ್ರೈಂ ಪೋಲಿಸ್ ಠಾಣೆಯ ನೀರಿಕ್ಷಕರು ಮತ್ತು ಸಿಬಂಧಿಗಳು ಮಾಹಿತಿ ಮೇರೆಗೆ ನಗರದ ಬಿಕರ್ನಕಟ್ಟೆ ಕೈಕಂಬ ಬಳಿಯ ನಿರ್ಮಾಣ ಹಂತದಲ್ಲಿರುವ ಮಾಲ್ ಎದುರುಗಡೆಯ ಬಸ್ಸು ನಿಲ್ದಾಣದ ಬಳಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಶರತ್ ಆರ್ ನ್ನು ವಶಕ್ಕೆ ಪಡೆದಿದ್ದು, ಈತನಿಂದ ಸುಮಾರು 6000 ಮೌಲ್ಯದ 270 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿರುತ್ತಾರೆ.