ಗಾಂಧಿ ಜಯಂತಿ : ಜಿಲ್ಲೆಯ ಪ್ರತಿ ಗ್ರಾಮಗಳಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ : ವಿಖ್ಯಾತ್ ಶೆಟ್ಟಿ

Spread the love

ಗಾಂಧೀ ಜಯಂತಿ ಅಂಗವಾಗಿ ಜಿಲ್ಲೆಯ ಪ್ರತಿ ಗ್ರಾಮಗಳಲ್ಲಿ ಯುವ ಮೋರ್ಚಾ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಆಯೋಜನೆ : ವಿಖ್ಯಾತ್ ಶೆಟ್ಟಿ

ಉಡುಪಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಯವರ 151 ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಅಕ್ಟೊಬರ್ 2 ರಂದು ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲೂ ಸ್ವಚ್ಛತಾ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರಿಗೆ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ವಿಖ್ಯಾತ್ ಶೆಟ್ಟಿ ಕರೆ ನೀಡಿದ್ದಾರೆ.

ಸ್ವಾತಂತ್ರ್ಯ ಭಾರತದ ಜೊತೆಗೆ ಸ್ವಚ್ಛ ಭಾರತ ಗಾಂಧೀಜಿಯವರ ಕನಸಾಗಿತ್ತು.ಗಾಂಧೀಜಿಯವರ ಸ್ಮರಣಾರ್ಥ ಪ್ರಧಾನ ಮಂತ್ರಿಯವರ ಕರೆಯಂತೆ ದೇಶದಾದ್ಯಂತ ಸ್ವಚ್ಛತಾ ಆಂದೋಲನವನ್ನು ಹಮ್ಮಿಕೊಂಡಿದ್ದು, ಜಿಲ್ಲೆಯಲ್ಲೂ  ಒಂದು ಹೆಜ್ಜೆ ಸ್ವಚ್ಛತೆಯ ಕಡೆಗೆ ಎಂಬ ದ್ಯೇಯ ವಾಕ್ಯದಂತೆ ನಾವೆಲ್ಲರೂ ಸ್ವಚ್ಛತೆಯಲ್ಲಿ ಭಾಗಿಯಾಗೋಣ ಮತ್ತು ಸ್ವಚ್ಛ ಭಾರತದ ಕನಸು ನನಸಾಗಿಸಲು ಒಟ್ಟಾಗಿ ಕೈಜೋಡಿಸುವಂತೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಯುವಮೋರ್ಚಾ ಪದಾಧಿಕಾರಿಗಳಾದ ಅಕ್ಷಿತ್ ಶೆಟ್ಟಿ ಹೆರ್ಗ, ಶರತ್ ಶೆಟ್ಟಿ ಉಪ್ಪುಂದ, ಸಚಿನ್ ಬೊಳ್ಜೆ, ಪ್ರವೀಣ್ ಪೂಜಾರಿ ಕಾಪು, ಸುಮಿತ್ ಮಡಿವಾಳ, ವಿನೋದ್, ಅಭಿರಾಜ್ ಮೊದಲಾದವರು ಉಪಸ್ಥಿತರಿದ್ದರು.


Spread the love