ಗುಜ್ಜಾಡಿ ಗ್ರಾಪಂ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿಗಳಿಗೆ ಶಾಸಕ ಸುಕುಮಾರ್ ಶೆಟ್ಟಿ ಗುದ್ದಲಿ ಪೂಜೆ

Spread the love

ಗುಜ್ಜಾಡಿ ಗ್ರಾಪಂ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿಗಳಿಗೆ ಶಾಸಕ ಸುಕುಮಾರ್ ಶೆಟ್ಟಿ ಗುದ್ದಲಿ ಪೂಜೆ

ಕುಂದಾಪುರ : ಬೈಂದೂರು ಕ್ಷೇತ್ರದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಕೇಂದ್ರ ಮತ್ತು ರಾಜ್ಯ ಸರಕಾರದ ಅನುದಾನ ಬಳಸಿಕೊಂಡು ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯ ಒದಗಿಸಲು ಪ್ರಯತ್ನಿಸಲಾಗುತ್ತಿದೆ. ಗುಜ್ಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈಗಾಗಲೇ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆದಿದ್ದು, ವಾರಾಹಿ ನೀರಾವರಿ ನಿಗಮ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಯೋಜನೆಯಡಿ ಸುಮಾರು 60 ಲಕ್ಷ ರೂ. ಅನುದಾನವನ್ನು ವಿವಿಧ ರಸ್ತೆ ಅಭಿವೃದ್ಧಿ ಕಾರ್ಯಗಳಿಗೆ ನೀಡಲಾಗಿದೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಹೇಳಿದರು.

ಗುಜ್ಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 50 ಲಕ್ಷ ರೂ. ವೆಚ್ಚದ ವಿವಿಧ ರಸ್ತೆಗಳ ಕಾಂಕ್ರೀಟಿಕರಣ ಕಾಮಗಾರಿಗೆ ಭಾನುವಾರ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಡಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಯೋಜನೆಯಡಿ ಸುಮಾರು 30 ಲಕ್ಷ ರೂ. ವೆಚ್ಚದ ಎಂ.ಭಾಸ್ಕರ ಪೈ ಸರಕಾರಿ ಪ್ರೌಢಶಾಲೆಯಿಂದ ಗುಹೇಶ್ವರಕ್ಕೆ ಹೋಗುವ ರಸ್ತೆ ಅಭಿವೃದ್ಧಿ ಹಾಗೂ ಕೊಡಪಾಡಿಯ ಭರತ್ ನಗರದಲ್ಲಿ ವಾರಾಹಿ ನೀರಾವರಿ ನಿಗವiದ 15 ಲಕ್ಷ ರೂ. ಅನುದಾನದಲ್ಲಿ ಆಶ್ರಯ ಕಾಲೋನಿ ರಸ್ತೆ ಅಭಿವೃದ್ಧಿ ಮತ್ತು 15 ಲಕ್ಷ ರೂ. ವೆಚ್ಚದಲ್ಲಿ ನಾಯಕವಾಡಿ ಜನತಾ ಕಾಲೋನಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಿದರು.

ಬಿಜೆಪಿ ಬೈಂದೂರು ಮಂಡಲ ಅದ್ಯಕ್ಷ ದೀಪಕಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್, ಸುರೇಶ ಬಟವಾಡಿ, ತಾಲೂಕು ಪಂಚಾಯತ್ ಸದಸ್ಯ ನಾರಾಯಣ ಕೆ., ಬಿಜೆಪಿ ಮುಖಂಡರಾದ ಉಮೇಶ ಮೇಸ್ತ, ಶೇಖರ ದೇವಾಡಿಗ, ಹರೀಶ ಮೇಸ್ತ, ರಾಘವೇಂದ್ರ ಗಾಣಿಗ, ಶ್ರೀನಾಥ ಮೊಗವೀರ, ಗುಜ್ಜಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರು, ಸ್ಥಳೀಯ ಬಿಜೆಪಿ ಕಾರ್ಯಕರ್ತರು, ಗ್ರಾಮಸ್ಥರು ಮತ್ತಿತರರು ಉಪಸ್ಥಿತರಿದ್ದರು.


Spread the love