ಗುರುಪುರ ಗುಡ್ಡ ಕುಸಿತ ಪ್ರಕರಣ: ಮೃತ ಮಕ್ಕಳ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಿಸಿದ ಯಡಿಯೂರಪ್ಪ 

Spread the love

ಗುರುಪುರ ಗುಡ್ಡ ಕುಸಿತ ಪ್ರಕರಣ: ಮೃತ ಮಕ್ಕಳ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಿಸಿದ ಯಡಿಯೂರಪ್ಪ 

ಮಂಗಳೂರು: ನಗರದ ಹೊರವಲಯದ ಗುರುಪುರದ ಬಂಗ್ಲೆಗುಡ್ಡೆಯಲ್ಲಿ ಗುಡ್ಡ ಕುಸಿದು ಮಕ್ಕಳಿಬ್ಬರು ಮೃತಪಟ್ಟ ಘಟನೆಗೆ ಸಂಬಂಧಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೃತ ಮಕ್ಕಳ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಧನ ಘೋಷಣೆ ಮಾಡಿದ್ದು, ಪರಿಹಾರ ಧನ ನೀಡುವಂತೆ ದ.ಕ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.

ಗುಡ್ಡ ಪ್ರದೇಶದಲ್ಲಿದ್ದ 19 ಮನೆಗಳ ಸ್ಥಳಾಂತರಕ್ಕೆ ಸೂಚನೆ ನೀಡಲಾಗಿದೆ. ಬೇರೆ ಗ್ರಾಮದಲ್ಲಿ ಮನೆಗಳನ್ನು ನಿರ್ಮಿಸಿ ಕೊಡಲು ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಸೂಚಿಸಿದ್ದಾರೆ.


Spread the love