Home Mangalorean News Kannada News ಗೃಹಲಕ್ಷ್ಮಿ ಯೋಜನೆಯಲ್ಲಿ ಜೀವಂತ ಫಲಾನುಭವಿಗಳನ್ನು ಮೃತರೆಂದು ತೋರಿಸುವ ಸಮಸ್ಯೆ ಶೀಘ್ರವಾಗಿ ಪರಿಹರಿಸಿ- ಭರತ್ ಮುಂಡೋಡಿ

ಗೃಹಲಕ್ಷ್ಮಿ ಯೋಜನೆಯಲ್ಲಿ ಜೀವಂತ ಫಲಾನುಭವಿಗಳನ್ನು ಮೃತರೆಂದು ತೋರಿಸುವ ಸಮಸ್ಯೆ ಶೀಘ್ರವಾಗಿ ಪರಿಹರಿಸಿ- ಭರತ್ ಮುಂಡೋಡಿ

Spread the love

ಗೃಹಲಕ್ಷ್ಮಿ ಯೋಜನೆಯಲ್ಲಿ ಜೀವಂತ ಫಲಾನುಭವಿಗಳನ್ನು ಮೃತರೆಂದು ತೋರಿಸುವ ಸಮಸ್ಯೆ ಶೀಘ್ರವಾಗಿ ಪರಿಹರಿಸಿ- ಭರತ್ ಮುಂಡೋಡಿ

ಮಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಮರಣ ಹೊಂದಿದ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮೆಯಾಗಿರುವ ಹಣದ ವಸೂಲಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ತಾಲೂಕು ಮಟ್ಟದಲ್ಲಿ ಸಭೆ ನಡೆಸಿ, ಸೂಕ್ತ ನಿರ್ಣಯ ಕೈಗೊಂಡು ಅಗತ್ಯ ಕ್ರಮಗಳನ್ನು ಜರುಗಿಸಬೇಕು. ಇದನ್ನು ಆದ್ಯತೆಯ ಮೇರೆಗೆ ತ್ವರಿತವಾಗಿ ಪರಿಹರಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ಸೂಚಿಸಿದ್ದಾರೆ.

ಅವರು ಗುರುವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಂದಿನ ದಿನಗಳಲ್ಲಿ ಮರಣ ಹೊಂದಿದ ಫಲಾನುಭವಿಗಳ ಖಾತೆಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮೆಯಾಗದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ತಾಲೂಕು ಮಟ್ಟದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಲೀಡ್ ಬ್ಯಾಂಕ್ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಸಭೆ ನಡೆಸಬೇಕು. ವಸೂಲಾತಿ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ, ಕೈಗೊಂಡ ಕ್ರಮಗಳ ಕುರಿತು ವರದಿ ಸಲ್ಲಿಸಿ, ಈ ಪ್ರಕ್ರಿಯೆಯಲ್ಲಿ ಶೇಕಡಾ 100 ರಷ್ಟು ಗುರಿ ಸಾಧಿಸಲು ಅಧಿಕಾರಿಗಳು ಬದ್ಧತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಅವರು ಸೂಚಿಸಿದರು.

ಯೋಜನೆಯಡಿ ಜೀವಂತ ಫಲಾನುಭವಿಗಳನ್ನು ತಪ್ಪಾಗಿ ಮೃತರೆಂದು ದಾಖಲಿಸಿರುವ ಪ್ರಕರಣಗಳನ್ನು ಗುರುತಿಸಿ, ಇಂತಹ ಸಮಸ್ಯೆಗಳು ಮರುಕಳಿಸದಂತೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಅವರು ತಿಳಿಸಿದರು.

ಶಕ್ತಿ ಯೋಜನೆಯಡಿ ಬಸ್ಗಳಲ್ಲಿ ವಿಶೇಷಚೇತನರಿಗಾಗಿ ಮೀಸಲಾದ ಸೀಟ್ಗಳು ಅವರಿಗೆ ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಈ ಆಸನಗಳಲ್ಲಿ ಇತರ ಪ್ರಯಾಣಿಕರಿಗೆ ಅವಕಾಶ ನೀಡದಂತೆ ಸಿಬ್ಬಂದಿಗಳಿಗೆ ಸೂಕ್ತ ಮಾಹಿತಿ ನೀಡಿ, ಅಗತ್ಯ ಸೂಚನೆಗಳನ್ನು ನೀಡಬೇಕು. ವಿಶೇಷಚೇತನ ಪ್ರಯಾಣಿಕರಿಗೆ ಪ್ರಯಾಣದ ಸಂದರ್ಭದಲ್ಲಿ ಯಾವುದೇ ತೊಂದರೆಯಾಗದಂತೆ ಮತ್ತು ಅವರಿಗೆ ಮೀಸಲಾದ ಆಸನಗಳ ಸೌಲಭ್ಯ ಸಮರ್ಪಕವಾಗಿ ದೊರೆಯುವಂತೆ ಸಂಬಂಧಪಟ್ಟ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.

ಅನ್ನಭಾಗ್ಯ ಯೋಜನೆಯು ಮಹತ್ವದ ಯೋಜನೆಯಾಗಿರುವುದರಿಂದ, ಯೋಜನೆಯಡಿ ನಡೆಯುತ್ತಿರುವ ಇ-ಕೆವೈಸಿ ಪ್ರಕ್ರಿಯೆಯನ್ನು ನಿಗದಿತ ಗುರಿಯಂತೆ ಪೂರ್ಣಗೊಳಿಸಲು ಎಲ್ಲರೂ ಸಹಕರಿಸಬೇಕು ಎಂದು ಅವರು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳು ಅರಣ್ಯ ಪ್ರದೇಶಗಳಿಂದ ಕೂಡಿದ್ದು, ವಿಪರೀತ ಗಾಳಿ ಮತ್ತು ಮಳೆಯ ಸಂದರ್ಭದಲ್ಲಿ ವಿದ್ಯುತ್ ಸರಬರಾಜು ವ್ಯವಸ್ಥೆಯನ್ನು ಸುಗಮವಾಗಿ ನಿರ್ವಹಿಸಲು ಸಾಕಷ್ಟು ತೊಂದರೆಗಳು ಎದುರಾಗುತ್ತಿವೆ. ವಿದ್ಯುತ್ ವ್ಯತ್ಯಯ ಉಂಟಾದ ಸಂದರ್ಭಗಳಲ್ಲಿ ದುರಸ್ತಿ ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳಲು ಸಿಬ್ಬಂದಿಯ ಕೊರತೆಯೂ ಸಮಸ್ಯೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ವಿದ್ಯುತ್ ಸರಬರಾಜು ವ್ಯವಸ್ಥೆಯನ್ನು ಸುಧಾರಿಸಲು ಅಗತ್ಯ ಸಂಖ್ಯೆಯಲ್ಲಿ ಸಹಾಯಕ ಪವರ್ಮ್ಯಾನ್ಗಳನ್ನು ನೇಮಕ ಮಾಡುವಂತೆ ಇಂಧನ ಸಚಿವರಿಗೆ ಪತ್ರ ಬರೆಯಲು ಸಭೆಯಲ್ಲಿ ನಿರ್ಣಯಿಸಲಾಯಿತು.

ತಾಲೂಕು ಮಟ್ಟದಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸುವ ನಿಟ್ಟಿನಲ್ಲಿ ಸ್ಥಳೀಯ ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಉದ್ಯೋಗದಾತ ಸಂಸ್ಥೆಗಳನ್ನು ಸಂಪರ್ಕಿಸಿ, ಅರ್ಹ ಅಭ್ಯರ್ಥಿಗಳಿಗೆ ಸೂಕ್ತ ಉದ್ಯೋಗಾವಕಾಶಗಳನ್ನು ಒದಗಿಸಲು ಕ್ರಮವಹಿಸುವಂತೆ ಅವರು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಭಾರಿ, ಪೆÇ್ರಬೆಶನರಿ ಐ.ಎ.ಎಸ್ ಅರ್ಚಿತ್ ಡೊಂಗ್ರೆ, ಸಮಿತಿ ಉಪಾಧ್ಯಕ್ಷರಾದ ಜೋಕಿಂ ಡಿಸೋಜ, ನಾರಾಯಣ ನಾಯ್ಕ್, ಸದಸ್ಯರಾದ ಅರುಣ್ ಕುಮಾರ್ ಶೆಟ್ಟಿ, ಆಲ್ವಿನ್ ಕ್ಲೆಮೆಂಟ್ ಕುಟಿನ್ಹ, ಜಯಂತಿ ಬಿ.ಎ, ಪಿ.ಎಸ್ ಗಂಗಾಧರ್, ಉಮಾನಾಥ್ ಶೆಟ್ಟಿ, ಕೃಷ್ಣಪ್ಪ ಜಿ.ರಾಮಕುಂಜ, ಎಸ್.ರಫೀಕ್, ಜಿಲ್ಲಾ ಪಂಚಾಯತ್ ಯೋಜನಾ ಅಂದಾಜು ಮತ್ತು ಮೌಲ್ಯಮಾಪನಾಧಿಕಾರಿ ಸುಷ್ಮಾ ಹಾಗೂ ವಿವಿಧ ಇಲಾಖಾಧಿಕಾರಿಗಳು ಇದ್ದರು.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
wpDiscuz
0
0
Would love your thoughts, please comment.x
()
x
Exit mobile version