ಗೋಳಿತ್ತೊಟ್ಟು: ಕಾರು ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Spread the love

ಗೋಳಿತ್ತೊಟ್ಟು: ಕಾರು ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಉಪ್ಪಿನಂಗಡಿ: ಬೈಕ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟು ಸಹ ಸವಾರೆ ಅವರ ಪತ್ನಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೇ 10ರಂದು ಮಧ್ಯಾಹ್ನ ಗೋಳಿತ್ತೊಟ್ಟು ಜಂಕ್ಷನ್‍ನಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ನಿವಾಸಿ, ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅರಸಿನಮಕ್ಕಿ ಯಲ್ಲಿ ಕೆಲಸ ಮಾಡುತ್ತಿದ್ದ ಸದಾನಂದ ಆಚಾರ್ಯ(59) ಮೃತಪಟ್ಟವರು. ಸಹಸವಾರೆ, ಇವರ ಪತ್ನಿ ಉಷಾ ಅವರು ಗಂಭೀರ ಗಾಯಗೊಂಡಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇವರು ಅರಸಿನಮಕ್ಕಿಯಿಂದ ಉಪ್ಪಿನಂಗಡಿಗೆ ಬೈಕ್ ನಲ್ಲಿ ಕೊಕ್ಕಡ ಮಾರ್ಗವಾಗಿ ಬಂದವರು ಗೋಳಿತ್ತೊಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕಿಸುತ್ತಿದ್ದಂತೆ ಉಪ್ಪಿನಂಗಡಿಯಿಂದ ಶಿರಾಡಿ ಕಡೆಗೆ ಹೋಗುತ್ತಿದ್ದ ಕಾರು ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಬೈಕ್ ಸವಾರ, ಸದಾನಂದ ಆಚಾರ್ಯ ಅವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪುತ್ತೂರು ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments