ಗೌರಿ ಲಂಕೇಶ್ ಹತ್ಯೆ ಇಂಡಿಯನ್ ಸೋಶಿಯಲ್ ಫೋರಂ ಸಂತಾಪ

Spread the love

ಗೌರಿ ಲಂಕೇಶ್ ಹತ್ಯೆ ಇಂಡಿಯನ್ ಸೋಶಿಯಲ್ ಫೋರಂ ಸಂತಾಪ

 ರಿಯಾದ್ : ಖ್ಯಾತ ಪತ್ರಕರ್ತೆ, ಚಿಂತಕಿ ಗೌರಿ ಲಂಕೇಶ್ ಅವರ ಹತ್ಯೆಯನ್ನು ಇಂಡಿಯನ್ ಸೋಶಿಯಲ್ ಫೋರಂ  ರಿಯಾದ್ ಕರ್ನಾಟಕ ರಾಜ್ಯ ಸಮಿತಿಯು ತೀವ್ರವಾಗಿ ಖಂಡಿಸಿದೆ. ಗೌರಿ ಲಂಕೇಶ್ ಅವರ ಹತ್ಯೆಯು ಸಮಸ್ತ ದೇಶಕ್ಕೆ ತುಂಬಲಾರದ ನಷ್ಟವಾಗಿದೆ.

   ಪ್ರಗತಿಪರರ ಹತ್ಯೆಗಳು ಪ್ರಜಾಪಭುತ್ವದ ಕಗ್ಗೊಲೆಯಾಗಿದೆ. ರಾಜ್ಯ ಸರ್ಕಾರವು ಪ್ರೋ. ಎಂ ಎನ್ ಕಲ್ಬುರ್ಗಿಯವರ ಹತ್ಯೆಯಾಗಿ ಎರಡು ವರ್ಷಗಳು ಕಳೆದರೂ ಆರೋಪಿಗಳನ್ನು ಪತ್ತೆಹಚ್ಚಲು ವಿಫಲವಾದ ಕಾರಣ ಇಂದು ನಾವು ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಕಳೆದುಕೊಳ್ಳಬೇಕಾಯಿತು.

ಮಹರಾಷ್ಟ್ರದ ಗೋವಿಂದ ಪನ್ಸಾರೆ ಮತ್ತು ನರೇಂದ್ರ ಧಾಬೋಲ್ಕರ್ ಹತ್ಯೆ ಮಾಡಿದ ರೀತಿಯಲ್ಲಿ ಗೌರಿ ಲಂಕೇಶ್ ಅವರನ್ನು ಕೊಂದ ಕಾರಣ ಇದೊಂದು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದಮನಿಸಲು ಸಂಘಟಿತ ಮತ್ತು ಪೂರ್ವ ನಿಯೋಜಿತ ಕೃತ್ಯವಾಗಿದೆ.

ರಾಜ್ಯ ಸರ್ಕಾರವು ತಕ್ಷಣವೇ ಗೌರಿ ಲಂಕೇಶ್ರವರನ್ನು ಕೊಂದ ಆರೋಪಿಗಳನ್ನು ಮತ್ತು ಸೂತ್ರದಾರ ಸಂಘಟನೆಗಳಿಗೆ ಬಂಧಿಸಿ, ನಿಷೇಧಿಸಬೇಕೆಂದು ಮತ್ತು ಇತರ ಪ್ರಗತಿಪರ ಚಿಂತಕರಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಇಂಡಿಯನ್ ಸೋಶಿಯಲ್ ಫೋರಂ  ರಿಯಾದ್ ಕರ್ನಾಟಕ ರಾಜ್ಯ ಸಮಿತಿಯು ಒತ್ತಾಯಿಸಿದೆ.


Spread the love