ಚಾರ್ಮಾಡಿ ಘಾಟ್ನಲ್ಲಿ ಟಿಟಿ ವಾಹನ ಪಲ್ಟಿ: ಗಾಯಾಳುಗಳಲ್ಲಿ ಓರ್ವ ವೃದ್ಧ ಸಾವು
ಮಂಗಳೂರು: ತಾಲೂಕಿನ ಚಾರ್ಮಾಡಿ ಘಾಟ್ನಲ್ಲಿ ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿದ ಟಿಟಿ ವಾಹನ ಪಲ್ಟಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದವರಲ್ಲಿ ಓರ್ವ ವೃದ್ಧ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಶೇಖರಪ್ಪ (59) ಎಂದು ಗುರುತಿಸಲಾಗಿದೆ
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮೇಲನಹಳ್ಳಿ ಗ್ರಾಮದವರು ಸೇರಿದಂತೆ ಒಟ್ಟು 10 ಮಂದಿ, ಅವರಲ್ಲಿ ಮೂವರು ಮಕ್ಕಳು ಸೇರಿ, ಟಿಟಿ ವಾಹನದಲ್ಲಿ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದರು. ಈ ವೇಳೆ ಚಾರ್ಮಾಡಿ ಘಾಟ್ನ ಒಂಬತ್ತನೇ ತಿರುವಿನಲ್ಲಿ ವಾಹನದ ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಲ್ಲಿ ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗಾಯಾಳುಗಳಲ್ಲಿ ಒಬ್ಬ ವೃದ್ಧ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇತರ ಗಾಯಾಳುಗಳ ಸ್ಥಿತಿ ಕುರಿತು ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಶನಿವಾರ ಬೆಳಗ್ಗೆ ಚಾರ್ಮಾಡಿ ಘಾಟ್ ನ ಒಂಬತ್ತನೇ ತಿರುವಿನಲ್ಲಿ ಈ ಅಪಘಾತ ಸಂಭವಿಸಿತ್ತು .ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
