ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ನಂದಿಬೆಟ್ಟಕ್ಕೆ ತೆರಳುತ್ತಿದ್ದ ನಾಲ್ವರ ದುರ್ಮರಣ

Spread the love

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ನಂದಿಬೆಟ್ಟಕ್ಕೆ ತೆರಳುತ್ತಿದ್ದ ನಾಲ್ವರ ದುರ್ಮರಣ

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಮಹೀಂದ್ರಾ ಕ್ಸೈಲೊ ಕಾರು ರಸ್ತೆಯಲ್ಲೇ ಪಲ್ಟಿ ಹೊಡೆದಿದ್ದು, ನಾಲ್ವರು ಯುವಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಅಂದ್ರಹಳ್ಳಿ ಬಳಿ ದುರ್ಘಟನೆ ಸಂಭವಿಸಿದ್ದು, ಆವಲಹಳ್ಳಿಯಿಂದ ನಂದಿಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ಮುಂಜಾನೆ 2.30ರಲ್ಲಿ ಅಪಘಾತ ನಡೆದಿದೆ.

ಬಾಗೇಪಲ್ಲಿ ತಾಲೂಕಿನ ಆವಲಹಳ್ಳಿಯ ನಕಲಪಲ್ಲಿ ಗ್ರಾಮದ ಮಂಜುನಾಥ್ (26), ರಮೇಶ್ (30), ಅಶೋಕ್ ರೆಡ್ಡಿ (26), ಗೌರಿಶ್ (23) ಮೃತಪಟ್ಟಿದ್ದು, ಐವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಹೊಸಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಚನ್ನರಾಯಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ದೇವನಹಳ್ಳಿ ಖಾಸಗಿ ಆಸ್ಪತ್ರೆ ರವಾನಿಸಲಾಗಿದೆ.


Spread the love