Home Mangalorean News Kannada News ಚಿಕ್ಕಮಗಳೂರು: ಕಾರು ಪಲ್ಟಿ; ಇಬ್ಬರು ಪ್ರಯಾಣಿಕರ ಸಾವು

ಚಿಕ್ಕಮಗಳೂರು: ಕಾರು ಪಲ್ಟಿ; ಇಬ್ಬರು ಪ್ರಯಾಣಿಕರ ಸಾವು

Spread the love

ಚಿಕ್ಕಮಗಳೂರು: ಕಾರು ಪಲ್ಟಿ; ಇಬ್ಬರು ಪ್ರಯಾಣಿಕರ ಸಾವು

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಪರಿಣಾಮ ಇಬ್ಬರು ಪ್ರಯಾಣಿಕರು ಮೃತಪಟ್ಟಿರುವ ಘಟನೆ ಜಿಲ್ಲೆಯ ತಾಲೂಕಿನ ಕರ್ತಿಕೆರೆ ಗ್ರಾಮದ ಬಳಿ ಸಂಭವಿಸಿದೆ.

ಬೆಂಗಳೂರು ಮೂಲದ ಮಂಜುನಾಥ್(30) ಮುತ್ತು ರಾಜ್ (28) ಮೃತ ದುರ್ದೈವಿಗಳು. ಕಾರಿನಲ್ಲಿ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೊರಟಿದ್ದಾಗ ಕರ್ತಿಕೆರೆ ಗ್ರಾಮದ ಬಳಿ ವೇಗವಾಗಿ ಬಂದ ಕಾರು ಚಾಲಕ ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿ ಆಗಿದೆ ಎನ್ನಲಾಗಿದೆ.

ಘಟನೆಯಲ್ಲಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

Exit mobile version