ಜಗದೀಶ್ ಕಾರಂತರಿಗೆ ಮಧ್ಯಂತರ ಜಾಮೀನು

Spread the love

ಜಗದೀಶ್ ಕಾರಂತರಿಗೆ ಮಧ್ಯಂತರ ಜಾಮೀನು

ಮಂಗಳೂರು: ಪುತ್ತೂರಿನಲ್ಲಿ ಪ್ರತಿಭಟನಾ ಸಭೆಯಲ್ಲಿ ಪೋಲಿಸರ ಕುರಿತು ಅವಹೇಳನಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿದ್ದ ಹಿಂದೂ ಜಾಗರಣ ವೇದಿಕೆಯ ಮುಖಂಡ ಜಗದೀಶ್ ಕಾರಂತರು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.

ಶುಕ್ರವಾರ ಬಂಧನಕ್ಕೊಳಗಾಗಿದ್ದ ಅವರನ್ನು ಮಧ್ಯರಾತ್ರಿ ಸುಮಾರು 1.30 ಕ್ಕೆ ಪುತ್ತೂರು ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ್ದು ನ್ಯಾಯಾಧೀಶರು ಮಧ್ಯಂತರ ಜಾಮೀನು ಮಂಜೂರುಗೊಳಸಿದ್ದಾರೆ.ಹಿಂದೂ ಜಾಗರಣ ವೇದಿಕೆಯ ವತಿಯಿಂದ

ಇತ್ತೀಚೆಗೆ ನಡೆದ ಪ್ರತಿಭಟನಾ ಸಭೆಯಲ್ಲಿ ಕೋಮುಪ್ರಚೋದನಕಾರಿಯಾಗಿ ಮಾತನಾಡಿದ್ದಲ್ಲದೆ ಪೋಲಿಸರ ವಿರುದ್ದ ಅವಮಾನಕಾರಿ ಹೇಳಿಕೆ ನೀಡಿ, ಬೆದರಿಕೆ ಒಡ್ಡಿದ ಆರೋಪದಲ್ಲಿ ಹಿಂಜಾವೇ ಕ್ಷೇತ್ರಿಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಕಾರಂತ್ ವಿರುದ್ದ ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅದರಂತೆ ಪೋಲಿಸರು ಬೆಂಗಳೂರಿನಲ್ಲಿ ಕಾರಂತರನ್ನು ಬಂಧಿಸಿದ್ದರು.


Spread the love