Home Mangalorean News Kannada News ಜನವರಿ 11 ರಂದು ಶ್ರೀಮತ್‌ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿ ಮಂಗಳೋತ್ಸವದ ಆಚರಣೆ

ಜನವರಿ 11 ರಂದು ಶ್ರೀಮತ್‌ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿ ಮಂಗಳೋತ್ಸವದ ಆಚರಣೆ

Spread the love

ಜನವರಿ 11 ರಂದು ಶ್ರೀಮತ್‌ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿ ಮಂಗಳೋತ್ಸವದ ಆಚರಣೆ

ಮಂಗಳೂರು: ಜಗದ್ಗುರು ಪರಮಪೂಜ್ಯ ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯಯ ಮಂಗಳೋತ್ಸವ ಕಾಶೀಮಠಾಧೀಶರಾದ ಶ್ರೀಮತ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಮಂಗಳೂರು ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆಸಲು ಸಕಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಹರಿದ್ವಾರದಲ್ಲಿ ವೃಂದಾವನಸ್ಥರಾಗಿರುವ ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರು ಕಾಶೀಮಠದ 20ನೇ ಪೀಠಾಧೀಪತಿಗಳಾಗಿ ನಿರಂತರ 70 ವರ್ಷಗಳ ಕಾಲ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದೊಂದಿಗೆ ಎಲ್ಲಾ ಸಮುದಾಯದ ಏಳಿಗೆಗಾಗಿ ತಮ್ಮ ತಪೋಶಕ್ತಿಯನ್ನು ಧಾರೆ ಎರೆದು ಆರ್ಶೀವದಿಸಿದ್ದಾರೆ. ಅವರ ಜನ್ಮಶತಮಾನೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಸಮಾಜ ಬಾಂಧವರು ನಿರ್ಧರಿಸಿ, ಈಗಿನ ಪೀಠಾಧೀಶರಾದ ಶ್ರೀಮತ್‌ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಮಾರ್ಗದರ್ಶನದೊಂದಿಗೆ ಹತ್ತು ಹಲವು ಕಾರ್ಯಕ್ರಮಗಳು ಕಳೆದ ಒಂದೂವರೆ ವರ್ಷಗಳಿಂದ ನಡೆದುಕೊಂಡು ಬರುತ್ತಿದೆ. ಸಮಾಜದ ಪ್ರತಿ ಮನೆಮನೆಯಲ್ಲಿ ಭಜನೆ ಮೂಲಕ ದೇವರನ್ನು ಒಲಿಸುವ ಸರಳ ಮಾರ್ಗವನ್ನು ನಮಗೆ ಉಪದೇಶಿಸಿದವರು ಶ್ರೀಮತ್‌ ಸುಧೀಂದ್ರ ತೀರ್ಥ ಸ್ವಾಮೀಜಿಯವರು. ಅದಕ್ಕಾಗಿ ಶ್ರೀಮತ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ಘ‌ರ್ ಘರ್ ಭಜನೆ, ವ್ಯಾಸೋಪಾಸನೆ, ಗುರುಗುಣಗಾನವನ್ನು ಸಮಾಜದ ಮನೆಗಳಲ್ಲಿ ನಡೆಸಿಕೊಂಡು ಬಂದಿದ್ದು, ಭಾರತ ಸಹಿತ ಜಗತ್ತಿನ ವಿವಿದೆಡೆ ವಾಸಿಸುವ ಸಮಾಜ ಭಾಂದವರ ಮನೆಗಳಲ್ಲಿ, ಸಂಸ್ಥೆಗಳಲ್ಲಿ, ಮಠ, ಮಂದಿರ, ದೇವಾಲಯಗಳಲ್ಲಿ ಇದನ್ನು ನಡೆಸಿಕೊಂಡು ಬರಲಾಗಿದೆ. ಅಂದಾಜು 10000 ಘರ್ ಘರ್ ಭಜನೆಗಳು ನಡೆದಿದ್ದು, ವಯಸ್ಸಿನ ಮಿತಿಯಿಲ್ಲದೆ ಅಬಾಲವೃದ್ಧರು ಇದರಲ್ಲಿ ಭಾಗವಹಿಸುವ ಮೂಲಕ ಹರಿಗುರು ಕೃಪೆಗೆ ಪಾತ್ರರಾಗಿದ್ದಾರೆ ಎಂದು ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಸಿಎ ಜಗನ್ನಾಥ್ ಕಾಮತ್ ರವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಶ್ರೀಮತ್‌ ಸುಧೀಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಸ್ವರ್ಣ ಪಾದುಕೆಯ ದಿಗ್ವಿಜಯ ಯಾತ್ರೆ ಹಿಮಾಲಯದ ತಪ್ಪಲಲ್ಲಿರುವ ಬದ್ರಿಯಿಂದ ಆರಂಭಿಸಿ ದಕ್ಷಿಣದಲ್ಲಿ ರಾಮೇಶ್ವರ, ತಿರುವನಂತಪುರದ ತನಕ ನಡೆದಿದೆ. ದೇಶದ ಉದ್ದಗಲಕ್ಕೂ ಇರುವ ಸಮಾಜ ಬಾಂಧವರ ಅಪೇಕ್ಷೆಯಂತೆ ಮನೆ, ಮಠ, ಮಂದಿರ, ದೇವಾಲಯಗಳಲ್ಲಿ ಪೂಜೆ ಸ್ವೀಕರಿಸಿ ಪಾದುಕಾ ದಿಗ್ವಿಜಯ ರಥಯಾತ್ರೆ ಮಂಗಳೂರನ್ನು ತಲುಪಿದೆ. ಈ ಪಾದುಕೆ ಆರಾಧಿಸಲ್ಪಟ್ಟ ಸ್ಥಳಗಳಲ್ಲಿ ಶ್ರೀಗಳ ಕೃಪೆಯಿಂದ ಭಕ್ತರ ಏಳಿಗೆಯ ವಿವಿಧ ದೃಷ್ಟಾಂತಗಳು ನಮ್ಮ ಕಣ್ಣಮುಂದಿರುವುದೇ ದಿವ್ಯ ಪಾದುಕೆಯ ಮಹತ್ವಕ್ಕೆ ಶ್ರೇಷ್ಠ ಉದಾಹರಣೆಗಳಾಗಿವೆ ಎಂದರು.

ಜನವರಿ 11 ರಂದು ಭಾನುವಾರ ಜನ್ಮಶತಾಬ್ದಿಯ ಮಂಗಳೋತ್ಸವ ನಡೆಯಲಿದ್ದು, ಮಧ್ಯಾಹ್ನ 3.30 ಕ್ಕೆ ಶ್ರೀ ಕಾಶೀಮಠ ಸಂಸ್ಥಾನದ ಕೊಂಚಾಡಿಯಲ್ಲಿರುವ ಶಾಖಾಮಠಕ್ಕೆ ಊರ, ಪರವೂರ ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ, ಅಲ್ಲಿಂದ ಭಜನಾ ಸಂಕೀರ್ತನಾ ವ್ಯಾಸಧ್ವಜ ಮತ್ತು ಸ್ವಾಮೀಜಿಯವರ ಪಾದುಕಾ ದಿಗ್ವಿಜಯ ಪಾದಯಾತ್ರೆ ಆರಂಭವಾಗಲಿದೆ ಕೊಂಚಾಡಿಯಿಂದ ಮೇರಿಹಿಲ್, ಯೆಯ್ಯಾಡಿ, ಕೆಪಿಟಿ, ಬಿಜೈ, ಕೆಎಸ್ ಆರ್ ಟಿಸಿ, ಲಾಲ್ ಭಾಗ್, ಎಂ.ಜಿ.ರಸ್ತೆ, ಪಿ.ಡಿ.ಎಸ್ ಜಂಕ್ಷನ್ ನಿಂದ ಬಲಕ್ಕೆ ತಿರುಗಿ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ವೃತ್ತದ ಮೂಲಕ ಕೆನರಾ ಹೈಸ್ಕೂಲ್ ನಲ್ಲಿ ಸೇರಲಿದೆ. ಅಲ್ಲಿ ಹತ್ತು ಸಾವಿರ ಮಂದಿಗೆ ಫಲಾಹಾರದ ವ್ಯವಸ್ಥೆಯನ್ನು ಮಾಡಲಾಗಿದೆ. ದಾರಿಯುದ್ದಕ್ಕೂ ಯೆಯ್ಯಾಡಿ, ಬಿಜೈ, ಲಾಲ್ ಭಾಗ್ ನ ನಿರ್ದಿಷ್ಟ ಜಾಗಗಳಲ್ಲಿ ಪಾನೀಯದ ವ್ಯವಸ್ಥೆ ಮಾಡಲಾಗಿದೆ.

ಈ ಪಾದಯಾತ್ರೆಯಲ್ಲಿ ವಿವಿಧ ಊರ ಭಜನಾ ಮಂಡಳಿಗಳು ದೇವರ, ಸ್ವಾಮೀಜಿಯವರ ಭಜನೆಯನ್ನು ಹಾಡುತ್ತಾ, ಪಾದಯಾತ್ರೆಯಲ್ಲಿ ಸಾಗಲಿವೆ. ಚೆಂಡೆ, ಬ್ಯಾಂಡ್ ಸೆಟ್, ದೇವರ, ಮಹಾಪುರುಷರ ವೇಷಭೂಷಣಗಳನ್ನು ಧರಿಸಿದ ಮಕ್ಕಳ ಟ್ಯಾಬ್ಲೊಗಳು, ವೇದಘೋಷ, ವಾದ್ಯಗಳೊಂದಿಗೆ ಸ್ವಾಮೀಜಿಯವರ ಭಾವಚಿತ್ರ ಇರುವ ಟ್ಯಾಬ್ಲೊ, ಸ್ವಾಮೀಜಿಯವರ ಪಾದುಕೆ ಇರುವ ಟ್ಯಾಬೋ ಸಹಿತ ವಿವಿಧ ಕಲಾಪ್ರಕಾರಗಳು ಪಾದಯಾತ್ರೆಯ ಶೋಭೆಯನ್ನು ಹೆಚ್ಚಿಸಲಿವೆ. ಕೆನರಾ ಹೈಸ್ಕೂಲ್ ನಲ್ಲಿ ಭಕ್ತರು ಆಹಾರ ಸೇವಿಸಿದ ಬಳಿಕ ಪಾದಯಾತ್ರೆ ಡೊಂಗರಕೇರಿ, ನ್ಯೂಚಿತ್ರಾ, ಶ್ರೀನಿವಾಸ ಥಿಯೇಟರ್, ಸ್ವದೇಶಿ ಸ್ಟೋರ್ ತಲುಪಲಿದೆ. ಈ ಸಂದರ್ಭದಲ್ಲಿ ಪಾದಯಾತ್ರೆಯಲ್ಲಿ ಕಾಶೀಮಠಾಧೀಶರಾದ ಪರಮಪೂಜ್ಯ ಶ್ರೀಮತ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಉಪಸ್ಥಿತಿ ಇರಲಿದೆ. ಸ್ವದೇಶಿ ಸ್ಟೋರ್ ಬಳಿಯಿಂದ ಸ್ವರ್ಣ ಲಾಲಕಿಯಲ್ಲಿ ದೇವರೊಂದಿಗೆ ಪಾದಯಾತ್ರೆ ಶ್ರೀ ವೆಂಕಟರಮಣ ದೇವಸ್ಥಾನ ತಲುಪಲಿದೆ. ಅಲ್ಲಿ ಮಂಗಳೋತ್ಸವದ ಸಭಾ ಕಾರ್ಯಕ್ರಮ ನಡೆಯಲಿದೆ.

ಮಂಗಳೋತ್ಸವ ಸಭಾ ಕಾರ್ಯಕ್ರಮ: ಜನವರಿ 11 ರಂದು ರಾತ್ರಿ 8.30 ರಿಂದ ಮಂಗಳೋತ್ಸವದ ಸಭಾ ಕಾರ್ಯಕ್ರಮದಲ್ಲಿ ಕಾಶೀಮಠಾಧೀಶ ಶ್ರೀಮತ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಹಿರಿಯ ಯತಿವರೇಣ್ಯರೂ, ಮಹಾತಪಸ್ವಿಗಳಾದ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಗುಣಗಾನದೊಂದಿಗೆ ಅರ್ಶೀವಚನ ನೀಡಲಿದ್ದಾರೆ. ಈ ಸಮಯದಲ್ಲಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ಪಾರ್ಕಿಂಗ್ ವ್ಯವಸ್ಥೆ: ಕೊಂಚಾಡಿಯಿಂದ ಆರಂಭವಾಗುವ ಪಾದಯಾತ್ರೆಯಲ್ಲಿ ಭಾಗವಹಿಸುವವರು ತಮ್ಮ ವಾಹನಗಳನ್ನು (ಬಸ್ಸು, ಕಾರು, ಜೀಪು, ವ್ಯಾನ್, ದ್ವಿಚಕ್ರವಾಹನ) ಕೊಂಚಾಡಿ ಕಾಶೀಮಠದ ಬಳಿಯಿರುವ ಕೆನರಾ ವಿಕಾಸ್‌ ಕಾಲೇಜಿನ ಮೈದಾನದಲ್ಲಿ ಪಾರ್ಕಿಂಗ್ ಮಾಡಬೇಕು. ಇನ್ನು ಕೊಂಚಾಡಿ ಕಾಶೀಮಠದ ಬಳಿ ಜನರನ್ನು ಇಳಿಸಿ, ಹಂಪನಕಟ್ಟೆಯ ಬಳಿಯಿಂದ ಮೂಲ್ಕಿಸುಂದರರಾಮ್ ಶೆಟ್ಟಿ ರಸ್ತೆಯ ಮೂಲಕ ಎಲೋಶಿಯಸ್ ಕಾಲೇಜಿನ ಗೇಟ್ ನಂಬರ್ 1ಒಳಗೆ ಹಾಗೂ ಗೇಟ್ ಸಿ ಒಳಗೆ ಪಾರ್ಕ್ ಮಾಡಬಹುದು. ಇನ್ನು ಕಾರುಗಳನ್ನು ಕೊಡಿಯಾಲ್ ಬೈಲ್ ಎಸ್ ಡಿಸಿಸಿ ಬ್ಯಾಂಕಿನ ಪಕ್ಕದಲ್ಲಿರುವ ಎಲೋಶಿಯಸ್ ಕಾಲೇಜಿನ ಗೇಟ್ ಮೂಲಕ ಹೋಗಿ ಲೊಯಲಾ ಸಭಾಂಗಣದ ಮೈದಾನದಲ್ಲಿ ಪಾರ್ಕಿಂಗ್ ಮಾಡಬಹುದು. ಇನ್ನು ಕೊಡಿಯಾಲ್ ಬೈಲ್ ನಲ್ಲಿರುವ ಬೆಸೆಂಟ್ ಕಾಲೇಜಿನಲ್ಲಿಯೂ ಬಸ್, ಕಾರುಗಳನ್ನು ಪಾರ್ಕಿಂಗ್ ಮಾಡಬಹುದು. ಕೆನರಾ ವಿಕಾಸ್ ಕಾಲೇಜು ಮೈದಾನದಲ್ಲಿ ಪಾರ್ಕಿಂಗ್ ಮಾಡಿದ ವಾಹನಗಳನ್ನು ರಾತ್ರಿ 10 ಗಂಟೆಯ ಬಳಿಕ ಸಿಟಿಪಾಯಿಂಟ್, ಪಾಸ್ ಪೋರ್ಟ್ ಆಫೀಸಿನ ಬಳಿ ತಂದು ನಿಲ್ಲಿಸಬೇಕು ಎಲೋಶಿಯಸ್, ಬೆಸೆಂಟ್ ನಲ್ಲಿ ಪಾರ್ಕಿಂಗ್ ಮಾಡಿದ ವಾಹನಗಳು ಅಲ್ಲಿಯೇ ಇದ್ದು ಭಕ್ತಾದಿಗಳು ಅಲ್ಲಿಗೆ ತೆರಳಿ ತಾವು ಆಗಮಿಸಿದ ವಾಹನಗಳ ಮೂಲಕ ತೆರಳಬೇಕು ಎಂದು ತಿಳಿಸಿದ್ದಾರೆ. ರಾತ್ರಿ ಭೋಜನ ಪ್ರಸಾದದ ವ್ಯವಸ್ಥೆ: ಊರ, ಪರವೂರ ಭಕ್ತರಿಗೆ ರಾತ್ರಿ ಊಟದ ವ್ಯವಸ್ಥೆಯನ್ನು ಮಾಡಲಾಗಿದ್ದು,ರಾತ್ರಿ 8.30 ರ ಬಳಿಕ ಮಹಾಮಾಯಾ ದೇವಸ್ಥಾನದ ಬಳಿ, ಉಮಾಮಹೇಶ್ವರ ದೇವಸ್ಥಾನದ ಬಳಿ, ಭವಂತಿ ಸ್ಟ್ರೀಟ್ ನಲ್ಲಿರುವ ಹಿಂದಿನ ನ್ಯೂ ಮಂಗಳೂರು ಹೆಲ್ತ್ ಕೇರ್ ಸೆಂಟರ್ ಜಾಗಗಳಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಶಾಸಕ ಡಿ ವೇದವ್ಯಾಸ ಕಾಮತ್, ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕೇಸರ ಅಡಿಗೆ ಬಾಲಕೃಷ್ಣ ಶೆಣೈ, ಮೊಕೇಸರ ಸಿಎ ಜಗನ್ನಾಥ್ ಕಾಮತ್, ಆಲ್ ಟೆಂಪಲ್ ಅಸೋಸಿಯೇಶನ್ ಅಧ್ಯಕ್ಷ ಅತುಲ್ ಕುಡ್ಡ, ಪ್ರಮುಖರಾದ ಕೋಟೇಶ್ವರ ದಿನೇಶ್ ಕಾಮತ್, ವಾಸುದೇವ್ ಕಾಮತ್, ರಘುವೀರ್ ಭಂಡಾರಕಾರ್, ಟಿ.ಗಣಪತಿ ಪೈ ಹಾಗೂ ಮುಖಂಡರು ಉಪಸ್ಥಿತರಿದ್ದರು.


Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
Inline Feedbacks
View all comments
wpDiscuz
0
0
Would love your thoughts, please comment.x
()
x
Exit mobile version