ಜಿಲ್ಲಾ ಶಸ್ತ್ರ ಚಿಕಿತ್ಸಕರಿಗೆ ತೊಂದರೆ ನೀಡುವವರ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ

Spread the love

ಜಿಲ್ಲಾ ಶಸ್ತ್ರ ಚಿಕಿತ್ಸಕರಿಗೆ ತೊಂದರೆ ನೀಡುವವರ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ

ಉಡುಪಿ: ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಎಚ್ ಅಶೋಕ್ ಅವರಿಗೆ ಕೆಲವೊಂದು ಸ್ಥಾಪಿತ ಹಿತಾಸಕ್ತಿಗಳು ಅನಗತ್ಯ ತೊಂದರೆ ನೀಡುತ್ತಿರುವ ಕುರಿತು ಸಾರ್ವಜನಿಕ ಹಿತರಕ್ಷಣಾ ವೇದಿಕೆ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಡಾಕ್ಟರ್ ಎಚ್. ಅಶೋಕ್ ಕಳೆದ ಒಂದು ವರ್ಷ ಐದು ತಿಂಗಳಿನಿಂದ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ಜನಾನುರಾಗಿಯಾಗಿ ದಕ್ಷ ಹಾಗೂ ಪ್ರಾಮಾಣಿಕವಾಗಿ ಜನ ಸೇವೆಯನ್ನು ನೀಡುತ್ತಾ ಬಂದಿದ್ದು ಆಸ್ಪತ್ರೆಯಲ್ಲಿ ಹಲವಾರು ವರ್ಷಗಳಿಂದ ಕೆಲವೊಂದು ವೈದ್ಯರು ಇಲ್ಲೇ ಸೇವೆ ಸಲ್ಲಿಸುತ್ತಿದ್ದು ಬಡ ರೋಗಿಗಳಿಗೆ ಸ್ಪಂದಿಸುತ್ತಿಲ್ಲ ಅದನ್ನು ಪ್ರಶ್ನಿಸಿದ್ದ ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಹಲವಾರು ರೀತಿಯಲ್ಲಿ ತೊಂದರೆಯನ್ನು ನೀಡುತ್ತಾ ಬಂದಿದ್ದಾರೆ. ಕೆಲವೊಂದು ಸ್ಥಾಪಿತ ಹಿತಾಸಕ್ತಿಗಳನ್ನು ಸೇರಿಸಿಕೊಂಡು ಮನಬಂದಂತೆ ತೊಂದರೆಯನ್ನು ನೀಡುತ್ತಿದ್ದಾರೆ.

ದಾನಿಗಳ ಸಹಾಯದಿಂದ ಆಸ್ಪತ್ರೆಗೆ ಬೇಕಾಗುವ ಹಲವು ಸಾಧನ ಉಪಕರಣಗಳನ್ನು ಪಡೆದು ಬಡ ರೋಗಿಗಳಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದು, ಯಾವುದೇ ಸಂದರ್ಭದಲ್ಲಿ ಕರೆ ಮಾಡಿದರು ತಕ್ಷಣ ಸ್ಪಂದಿಸಿ ಜನಾನುರಾಗಿಯಾಗಿರುತ್ತಾರೆ.

ಕೆಲವೊಂದು ಕಾಣದ ಕೈಗಳು ಇವರನ್ನು ವರ್ಗಾವಣೆಗೊಳಿಸಿದ್ದು ಅದನ್ನು ಕರ್ನಾಟಕ ನ್ಯಾಯ ಮಂಡಳಿಯಲ್ಲಿ ಪ್ರಶ್ನಿಸಿದ್ದು ಅವರಿಗೆ ವ್ಯತಿರಿಕ್ತ ತೀರ್ಪು ಬಂದಿದ್ದು ಅದನ್ನು ಅವರು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದು ಕರ್ನಾಟಕ ಉಚ್ಚ ನ್ಯಾಯಾಲವು ವರ್ಗಾವಣೆ ಆದೇಶವನ್ನು ರದ್ದುಗೊಳಿಸಿ ಪುನಃ ಜಿಲ್ಲಾ ಶಸ್ತ್ರಚಿಕಿತ್ಸಕರಾಗಿ ಮುಂದುವರೆಸಿರುತ್ತಾರೆ.

ಕಳೆದ ಒಂದೂವರೇ ವರ್ಷದಿಂದ ಮರಣೋತ್ತರ ಪರೀಕ್ಷೆ ಇರಬಹುದು ಅಥವಾ ರೋಗಿಗಳ ಆರೈಕೆ ವಿಷಯವಿರಬಹುದು ಹಾಗೂ ತಕ್ಷಣ ಜನರ ನೋವಿಗೆ ಸ್ಪಂದಿಸುತ್ತಿರುವ ಇವರಿಗೆ ಇನ್ನು ಮುಂದೆ ಯಾವುದೇ ತೊಂದರೆ ಆಗದಂತೆ ಸೂಕ್ತ ಕ್ರಮ ವಹಿಸಲು ತಮ್ಮಲ್ಲಿ ವಿನಂತಿಸಲಾಗಿದೆ. ಈಗಾಗಲೇ ಇವರು ಎರಡು ಬಾರಿ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆದುಕೊಂಡಿದ್ದು ಇದು ಇವರ ಕಾರ್ಯದಕ್ಷತೆಗೆ ಹಿಡಿದ ಕೈಗನ್ನಡಿಯಾಗಿರುತ್ತದೆ.

ಇದುವರೆಗೆ ಈ ತರದಲ್ಲಿ ಸ್ಪಂದಿಸುತ್ತಿರುವ ಯಾವುದೇ ಜಿಲ್ಲಾ ಶಸ್ತ್ರಚಿಕಿತ್ಸಕರು ನಮ್ಮ ಜಿಲ್ಲೆಗೆ ಬಂದಿರುವುದಿಲ್ಲ. ಅತ್ಯುತ್ತಮ ಶಸ್ತ್ರಚಿಕಿತ್ಸಕರಾದ ಇವರಿಗೆ ಕೆಲವೊಂದು ವೈದ್ಯರು ಹಾಗೂ ಸ್ಥಾಪಿತ ಹಿತಾಸಕ್ತಿಗಳು ಇವರ ತೇಜೋವಧೆಗೆ ಪ್ರಯತ್ನಿಸುತ್ತಿದ್ದು ಇದನ್ನು ನಾವೆಲ್ಲರೂ ಉಗ್ರವಾಗಿ ಖಂಡಿಸುತ್ತೇವೆ ಮುಂದೆ ಈ ಈ ತರಹದ ಘಟನೆಗಳಿಗೆ ಆಸ್ಪದ ನೀಡದಂತೆ ತಾವು ಕ್ರಮ ಕೈಗೊಳ್ಳುವಂತೆ ವಿನಂತಿಸುತ್ತೇವೆ. ಮುಂದೆ ಇಂಥ ಘಟನೆಗಳು ಸಂಭವಿಸಿದಲ್ಲಿ ಉಗ್ರ ಹೋರಾಟವನ್ನು ನಡೆಸುತ್ತೇವೆ ಎಂದು ತಮ್ಮ ಗಮನಕ್ಕೆ ತರಬಯಸುತ್ತೇವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿದ ಬಳಿಕ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಎಚ್ ಅಶೋಕ್ ಅವರನ್ನು ಭೇಟಿಯಾಗಿ ನೈತಿಕ ಬೆಂಬಲ ಸೂಚಿಸಿಲಾಯಿತು

ಈ ವೇಳೆ ಸಮಿತಿಯ ಸದಸ್ಯರುಗಳಾದ ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೇರಾ, ವಿಶ್ವಾಸ್ ಅಮೀನ್, ಮುರಳಿ ಶೆಟ್ಟಿ, ರಮೇಶ್ ತಿಂಗಳಾಯ, ಯಾದವ ಕೊಳ, ರಾಮಪ್ಪ ಸಾಲಿಯಾನ್, ಪದ್ಮನಾಭ ಬಂಗೇರ, ಅಬೂಬಕ್ಕರ್ ಕಾಸಿಮ್, ಸೂರಜ್ ಕಲ್ಮಾಡಿ, ಅಕ್ಷತ್ ಪೈ, ಗಣೇಶ್ ದೊಡ್ಡಣಗುಡ್ಡೆ, ಸುದರ್ಶನ್ ಪಡುಕೆರೆ ಹಾಗೂ ಇತರರು ಉಪಸ್ಥಿತರಿದ್ದರು.


Spread the love
Subscribe
Notify of

0 Comments
Inline Feedbacks
View all comments