ಜಿಲ್ಲೆಯಲ್ಲಿ ವಿಪರೀತ ಮಳೆ- ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಹೆಬ್ಸಿಬಾ ರಾಣಿ ಸೂಚನೆ

Spread the love

ಜಿಲ್ಲೆಯಲ್ಲಿ ವಿಪರೀತ ಮಳೆ- ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಹೆಬ್ಸಿಬಾ ರಾಣಿ ಸೂಚನೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ರಾಜ್ಯದ ಕರಾವಳಿ ಪ್ರದೇಶದ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ (ಆಗಸ್ಟ್ 7 ಮತ್ತು 8) ವಿಪರೀತ ಮಳೆ(205 ಮೀ.ಮೀ) ಹಾಗೂ ಕರಾವಳಿ ತೀರ ಪ್ರದೇಶಗಳಲ್ಲಿ ಭಾರೀ ಗಾಳಿ ಬೀಸುವ ಸಂಭವವಿರುವುದಾಗಿ ಹವಾಮಾನ ಇಲಾಖೆಯಿಂದ ಮುನ್ಸೂಚನೆ ಬಂದಿರುವುದರಿಂದ ಸಮುದ್ರ ಹಾಗೂ ನದಿಗಳಲ್ಲಿ ಮೀನುಗಾರಿಕೆಗೆ ಹಡಗು ಮತ್ತು ದೋಣಿಗಳು ತೆರಳದಂತೆ ಹಾಗೂ ಸಾರ್ವಜನಿಕರು ಮತ್ತು ಪ್ರವಾಸಿಗರು ಹೋಗದಂತೆ ಎಚ್ಚರ ವಹಿಸುವುದು ಹಾಗೂ ಜಿಲ್ಲೆಯಲ್ಲಿ ಮುಂಜಾಗೃತ ಕ್ರಮವಾಗಿ ಎಲ್ಲಾ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು, ತಮ್ಮ ಮೊಬೈಲ್ / ಕಚೇರಿ ದೂರವಾಣಿ / ವಾಹನ ಅಗತ್ಯ ಪರಿಕ್ರಮಗಳನ್ನು ಸದಾ ಸನ್ನದ್ಧರಾಗಿರಿಸಿಕೊಂಡು ತಕ್ಷಣವೇ ಸ್ಪಂದಿಸುವಂತೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆದೇಶ ಹೊರಡಿಸಿರುತ್ತಾರೆ.


Spread the love