ಜಿ ಎಸ್ ಟಿ ಸರಳೀಕರಣ ಗೊಳಿಸಿ ದೇಶದ ಆರ್ಥಿಕ ಪ್ರಗತಿಗೆ ಮುನ್ನಡಿ ಬರೆದ ಕೇಂದ್ರ ಸರಕಾರ: ಯಶ್ಪಾಲ್ ಸುವರ್ಣ
ಉಡುಪಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ 56ನೇ ಜಿ ಎಸ್ ಟಿ ಕೌನ್ಸಿಲ್ ಸಭೆಯಲ್ಲಿ ಅಗತ್ಯ ವಸ್ತುಗಳ ಮೇಲಿನ ಸುಂಕವನ್ನು ಕಡಿತಗೊಳಿಸಿ, ಸರಳೀಕರಣ ಮಾಡುವ ಮೂಲಕ ದೇಶದ ಆರ್ಥಿಕ ಪ್ರಗತಿಗೆ ಮುನ್ನಡಿ ಬರೆದಿದೆ ಎಂದು ಉಡುಪಿ ಶಾಸಕರಾದ ಯಶ್ ಸುವರ್ಣ ಹರ್ಷ ವ್ಯಕ್ತಪಡಿಸಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ಸಂದರ್ಬದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದಂತೆ ದೇಶದ ಜನ ಸಾಮಾನ್ಯರು, ರೈತರಿಗೆ ಸಹಕಾರ ನೀಡುವ ನಿಟ್ಟಿನಲ್ಲಿ ಜಿ ಎಸ್ ಟಿ ಕಡಿತ ಮಾಡುವ ಭರವಸೆಯನ್ನು ಕೇಂದ್ರ ಸರ್ಕಾರ ಈಡೇರಿಸಿದೆ.
ಜಿ ಎಸ್ ಟಿ ಸರಳೀಕರಣ ಗೊಳಿಸುವ ನಿಟ್ಟಿನಲಿಪ್ರಸ್ತುತ ಇರುವ ಶೇ. 12 ಮತ್ತು ಶೇ. 28ರ ತೆರಿಗೆ ಸ್ಲ್ಯಾಬ್ಗಳನ್ನು ತೆಗೆದುಹಾಕಿ, ಕೇವಲ ಶೇ. 5 ಮತ್ತು ಶೇ. 18ರ ಎರಡು ಹಂತದ ತೆರಿಗೆ ರಚನೆಯನ್ನು ಜಾರಿಗೆ ತರಲು ಜಿ ಎಸ್ ಟಿ ಕೌನ್ಸಿಲ್ ಸಭೆ ಒಪ್ಪಿಗೆ ಸೂಚಿಸಿದೆ.
ಈ ಹಿಂದೆ ಜಿ ಎಸ್ ಟಿ ಜನಸಾಮಾನ್ಯರಿಗೆ ಹೊರೆ, ದರ ಏರಿಕೆ ಬಗ್ಗೆ ವ್ಯಾಪಕವಾಗಿ ಅಧಾರ ರಹಿತ ಟೀಕೆ ಮಾಡುತ್ತಿದ್ದ ಕಾಂಗ್ರೆಸ್ ಸಹಿತ ವಿರೋಧ ಪಕ್ಷಗಳು ಇದೀಗ ಕೇಂದ್ರ ಸರ್ಕಾರ ಜನಸಾಮಾನ್ಯರ ಪರವಾಗಿ ಜಿ ಎಸ್ ಟಿ ತೆರಿಗೆ ಕಡಿತ ಮಾಡಿದ ಬಳಿಕ ನೀರಿನಿಂದ ಹೊರತೆಗೆದ ಮೀನಿನನಂತೆ ಚಡಪಡಿಸುತ್ತಿದೆ.
ಜಿ ಎಸ್ ಟಿ ಕೌನ್ಸಿಲ್ ಸಭೆಯಲ್ಲಿ ರಾಜ್ಯದ ಪ್ರತಿನಿಧಿಯಾಗಿರುವ ಕಂದಾಯ ಸಚಿವರು ಜಿ ಎಸ್ ಟಿ ತೆರಿಗೆ ಕಡಿತದಿಂದ ರಾಜ್ಯಕ್ಕೆ 15 ಸಾವಿರ ಕೋಟಿ ಆದಾಯ ನಷ್ಟವಾಗುತ್ತದೆ ಅದನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ಭರಿಸುವಂತೆ ಹೇಳಿಕೆ ನೀಡುವ ಮೂಲಕ ಪರೋಕ್ಷವಾಗಿ ಜಿ ಎಸ್ ಟಿ ತೆರಿಗೆ ಕಡಿತವನ್ನು ವಿರೋಧಿಸುತ್ತಿರುವುದು ದುರದೃಷ್ಟಕರ. ರಾಜ್ಯ ಕಾಂಗ್ರೆಸ್ ಸರಕಾರ ತಕ್ಷಣ ಜಿ ಎಸ್ ಟಿ ತೆರಿಗೆ ಕಡಿತದ ಬಗ್ಗೆ ತಮ್ಮ ನಿಲುವನ್ನು ಕೂಡಲೇ ಸ್ಪಷ್ಟ ಪಡಿಸಬೇಕು ಎಂದು ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.