ಜಿ.ಟಿ.ಟಿ.ಸಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಮಂಗಳೂರು: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ), ಬೈಕಂಪಾಡಿ ಮಂಗಳೂರು ಇಲ್ಲಿ ಬಿ.ಇ ( ಕಂಪ್ಯೂಟರ್ ಸೈನ್ಸ್) ಅಥವಾ ಬಿ.ಇ (ಇನ್ಫಾರ್ಮೇಶನ್ ಸೈನ್ಸ್) ಮತ್ತು ಬಿ.ಇ ( ಮೆಕ್ಯಾನಿಕಲ್) ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅದೇ ರೀತಿ ಪದವಿ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರುವವರಿಂದ ಆಫೀಸು ಕ್ಲರ್ಕ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ದೂ.ಸಂ: 9008263660, 8073208137, 0824-2408003 ಸಂಪರ್ಕಿಸಬಹುದು ಎಂದು ಜಿ.ಟಿ.ಟಿ.ಸಿ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
