ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ ಕೊಡುಗೆ : ದ ಕ ಜಿಲ್ಲಾ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಉಚಿತ ಮಾಸ್ಕ್

Spread the love

ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ ಕೊಡುಗೆ : ದ ಕ ಜಿಲ್ಲಾ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಉಚಿತ ಮಾಸ್ಕ್

ಮಂಗಳೂರು: ಕೊರೊನ ಕಾರಣದಿಂದ ಮುಂದೂಡಲ್ಪಟ್ಟಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆ ಜೂನ್ ತಿಂಗಳ 25 ರಿಂದ ಜುಲೈ 4 ರ ವರೆಗೆ ನಡೆಯಲಿದ್ದು ರಾಜ್ಯ ಸರಕಾರ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಫೇಸ್ ಮಾಸ್ಕ್ ಕಡ್ಡಾಯಗೊಳಿಸಿರುತ್ತದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ನಿರ್ಭಿತಿಯಿಂದ ಪರೀಕ್ಷೆ ಬರೆಯುವಲ್ಲಿ ಅನುಕೂಲವಾಗುವಂತೆ 30, 000 ಟ್ರಿಪಲ್ ಲೇಯರ್ ಫೇಸ್ ಮಾಸ್ಕ್, ಶಿಕ್ಷಕರ ಆರೋಗ್ಯ ರಕ್ಷಣೆಗಾಗಿ ಎನ್ 95 ಮಾಸ್ಕ್, ಫೇಸ್ ಶೀಲ್ಡ್ ಗಳನ್ನು ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ ಪರವಾಗಿ ದ ಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ ಕೋಟ್ಯಾನ್ ಮತ್ತು ಮೊಗವೀರ ಯುವ ಸಂಘಟನೆಯ ಜಿಲ್ಲಾಅಧ್ಯಕ್ಷರಾದ ಶಿವರಾಮ್ ಕೆ ಎಮ್ ರವರು ದ ಕ ಜಿಲ್ಲಾ ಪಂಚಾಯತ್ ಸಿ ಇ ಓ ಸೆಲ್ವಮಣಿ ಐ ಎ ಎಸ್ ಮತ್ತು ಡಿಡಿ ಪಿ ಐ ಮಲ್ಲೇ ಸ್ವಾಮಿಯವರಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಮಾತನಾಡಿ ಕೊರೊನದಂತಹ ಮಹಾಮಾರಿಯ ಈ ಸಂದರ್ಭದಲ್ಲಿ ಜನರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುವುದೇ ನಿಜವಾದ ದೇವರ ಸೇವೆ, ಅದರಲ್ಲೂ ಜಿ ಶಂಕರ್ ರವರು ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಸುಮಾರು ಎಂಟು ಲಕ್ಷ ರೂಪಾಯಿ ಮೌಲ್ಯದ ಮಾಸ್ಕ್ ಗಳನ್ನು ನೀಡಿರುದಕ್ಕೆ ಜಿಲ್ಲಾಡಳಿತದ ಪರವಾಗಿ ಕೃತಜ್ಞತೆ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರತಿನಿಧಿಗಳು ವಿದ್ಯಾರ್ಥಿಗಳ ಜೀವನದಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶ ಬಹಳ ಮುಖ್ಯವಾದದ್ದು, ವಿದ್ಯಾರ್ಥಿಗಳು ನಿರ್ಭಿತಿಯಿಂದ ಪರೀಕ್ಷೆ ಬರೆಯುವಲ್ಲಿ ಉಡುಪಿ ಜಿಲ್ಲೆಯಲ್ಲಿ ಪರೀಕ್ಷೆ ಬರೆಯುತ್ತಿರುವ 16,300 ವಿದ್ಯಾರ್ಥಿಗಳಿಗೆ ಈಗಾಗಲೇ ಫೇಸ್ ಮಾಸ್ಕ್ ನೀಡಲಾಗಿದೆ, ದ ಕ ಜಿಲ್ಲೆಯ 30000 ವಿದ್ಯಾರ್ಥಿಗಳಿಗೂ ಫೇಸ್ ಮಾಸ್ಕ್ ವಿತರಿಸಿದ್ದೇವೆ, ಶಿವಮೊಗ್ಗ ಜಿಲ್ಲೆಯ 25500 ವಿದ್ಯಾರ್ಥಿಗಳಿಗೆ ಮತ್ತು ವಿಜಯಪುರ ಜಿಲ್ಲೆಯ 37000 ವಿದ್ಯಾರ್ಥಿಗಳಿಗೆ ಫೇಸ್ ಮಾಸ್ಕ್ ವಿತರಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯದಲ್ಲಿ ಕೊರೊನ ಭಯ ಬೇಡ, ಉತ್ತಮ ಅಂಕ ಗಳಿಸುವ ಮೂಲಕ ಕೊರೊನ ವಿರುದ್ದ ಹೋರಾಡಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ ನ ಶಂಕರ್ ಸಾಲ್ಯಾನ್, ಚಂದ್ರೇಶ್ ಪಿತ್ರೋಡಿ ಉಪಸ್ಥಿತರಿದ್ದರು.


Spread the love