ಜುಲೈ 14 : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

Spread the love

ಜುಲೈ 14 : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶವನ್ನು ಜುಲೈ 14 ರಂದು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ನಾಳೆ ಬೆಳಿಗ್ಗೆ 11 ಗಂಟೆಗೆ ಪರೀಕ್ಷೆ ಫಲಿತಾಂಶ ಬಿಡುಗಡೆಯಾಲಿದೆ. ಫಲಿತಾಂಶದ ಮಾಹಿತಿಯನ್ನು ವಿದ್ಯಾರ್ಥಿಗಳು ಅಥವಾ ಅವರ ಪಾಲಕರ ಮೊಬೈಲ್ ಗೆ ಎಸ್ ಎಂ ಎಸ್ ಮೂಲಕ ಕಳುಹಿಸಿಕೊಡಲಾಗುವುದು ಎಂದರು.

ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 4ರಿಂದ ಆರಂಭವಾಗಿತ್ತು. ಮಾರ್ಚ್ ಮೂರನೇ ವಾರದಲ್ಲಿ ಕೋವಿಡ್ ಸಂಕಟ ಹೆಚ್ಚಾದ ಕಾರಣದ ಮಾರ್ಚ್ 23ರಂದು ನಡೆಯಬೇಕಿದ್ದ ಇಂಗ್ಲೀಷ್ ಪರೀಕ್ಷೆಯನ್ನು ಮುಂದೂಡಲಾಗಿತ್ತು. ನಂತರ ಸೂಕ್ತ ಸುರಕ್ಷಿತ ವ್ಯವಸ್ಥೆಯೊಂದಿಗೆ ಜೂನ್ 18ರಂದು ಇಂಗ್ಲೀಷ್ ಪರೀಕ್ಷೆ ನಡೆಸಲಾಗಿತ್ತು.


Spread the love