ಜುಲೈ 19: ಉಡುಪಿ ಜಿಲ್ಲೆಯಲ್ಲಿ ಮತ್ತೆ 134 ಮಂದಿಗೆ ಕೊರೋನಾ ಪಾಸಿಟಿವ್

Spread the love

ಜುಲೈ 19: ಉಡುಪಿ ಜಿಲ್ಲೆಯಲ್ಲಿ ಮತ್ತೆ 134 ಮಂದಿಗೆ ಕೊರೋನಾ ಪಾಸಿಟಿವ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾನುವಾರ ಕೊರೋನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಿದ್ದು, ಒಟ್ಟು 134 ಮಂದಿಗೆ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 2222 ಕ್ಕೆ ಏರಿಕೆಯಾಗಿದೆ.

ಭಾನುವಾರ 455 ಮಂದಿಯ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಗಳಿಗೆ ಕಳುಹಿಸ ಲಾಗಿದೆ. 509 ವರದಿಗಳು ಬರುವುದು ಬಾಕಿ ಇದೆ. ಶೀತಜ್ವರ, ತೀವ್ರ ಉಸಿರಾಟದ ಸಮಸ್ಯೆ ಹಾಗೂ ಕೋವಿಡ್ ಲಕ್ಷಣಗಳು ಕಂಡುಬಂದ 27 ಜನರನ್ನು ಐಸೊಲೇಷನ್ ವಾರ್ಡ್ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲೆಯಲ್ಲಿ ಇದುವರೆಗೂ 1628 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 584ಸಕ್ರಿಯ ಪ್ರಕರಣಗಳು ಮಾತ್ರ ಬಾಕಿ ಇವೆ. , ಇದುವರೆಗೂ 11 ಜನ ಸೋಂಕಿತರು ಮೃತಪಟ್ಟಿದ್ದಾರೆ.

ಎಲ್ಲಾ ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.


Spread the love