ಜುಲೈ 24: ಉಡುಪಿ ಜಿಲ್ಲೆಯಲ್ಲಿ ಮತ್ತೆ 190 ಮಂದಿಗೆ ಕೊರೋನಾ ಪಾಸಿಟಿವ್ ದೃಢ

Spread the love

ಜುಲೈ 24: ಉಡುಪಿ ಜಿಲ್ಲೆಯಲ್ಲಿ ಮತ್ತೆ 190 ಮಂದಿಗೆ ಕೊರೋನಾ ಪಾಸಿಟಿವ್ ದೃಢ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ , ಒಟ್ಟು 190 ಮಂದಿಗೆ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 3036 ಕ್ಕೆ ಏರಿಕೆಯಾಗಿದೆ.

ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದ, ಶೀತಜ್ವರ, ಉಸಿರಾಟದ ಸಮಸ್ಯೆ ಇರುವ 413 ಜನರ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಶುಕ್ರವಾರ 265 ವರದಿಗಳು ನೆಗೆಟಿವ್ ಬಂದಿದ್ದು, 190 ಪಾಸಿಟಿವ್ ಬಂದಿವೆ. 611 ವರದಿಗಳು ಬರುವುದು ಬಾಕಿ ಇದೆ.

ಸೋಂಕಿನ ಲಕ್ಷಣಗಳು ಕಂಡುಬಂದ 217 ಮಂದಿಗೆ ಐಸೊಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಇದುವರೆಗೂ 1929 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 1096 ಸಕ್ರಿಯ ಪ್ರಕರಣಗಳು ಮಾತ್ರ ಬಾಕಿ ಇವೆ. , ಇದುವರೆಗೂ 13 ಜನ ಸೋಂಕಿತರು ಮೃತಪಟ್ಟಿದ್ದಾರೆ.


Spread the love