Home Mangalorean News Kannada News ಜುಲೈ 25: ಉಡುಪಿ ಜಿಲ್ಲೆಯಲ್ಲಿ ಮತ್ತೆ 182 ಮಂದಿಗೆ ಕೊರೋನಾ ಪಾಸಿಟಿವ್ ದೃಢ

ಜುಲೈ 25: ಉಡುಪಿ ಜಿಲ್ಲೆಯಲ್ಲಿ ಮತ್ತೆ 182 ಮಂದಿಗೆ ಕೊರೋನಾ ಪಾಸಿಟಿವ್ ದೃಢ

Spread the love

ಜುಲೈ 25: ಉಡುಪಿ ಜಿಲ್ಲೆಯಲ್ಲಿ ಮತ್ತೆ 182 ಮಂದಿಗೆ ಕೊರೋನಾ ಪಾಸಿಟಿವ್ ದೃಢ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಶನಿವಾರ , ಒಟ್ಟು 182 ಮಂದಿಗೆ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 3218 ಕ್ಕೆ ಏರಿಕೆಯಾಗಿದೆ.

ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದ, ಶೀತಜ್ವರ, ಉಸಿರಾಟದ ಸಮಸ್ಯೆ ಇರುವ 592 ಜನರ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಶನಿವಾರ 182 ವರದಿಗಳು ನೆಗೆಟಿವ್ ಬಂದಿದ್ದು, 182 ಪಾಸಿಟಿವ್ ಬಂದಿವೆ. 528 ವರದಿಗಳು ಬರುವುದು ಬಾಕಿ ಇದೆ.

ಸೋಂಕಿನ ಲಕ್ಷಣಗಳು ಕಂಡುಬಂದ 238 ಮಂದಿಗೆ ಐಸೊಲೇಷನ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಇದುವರೆಗೂ 2008 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 1199 ಸಕ್ರಿಯ ಪ್ರಕರಣಗಳು ಮಾತ್ರ ಬಾಕಿ ಇವೆ. , ಇದುವರೆಗೂ 13 ಜನ ಸೋಂಕಿತರು ಮೃತಪಟ್ಟಿದ್ದಾರೆ.


Spread the love

Exit mobile version