ಜುಲೈ 25: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪರಿಷ್ಕೃತ ದಕ ಜಿಲ್ಲಾ ಪ್ರವಾಸ
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಜುಲೈ 25 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ.
ಅಂದು ಬೆಳಿಗ್ಗೆ 6:55 ಮಂಗಳೂರು ವಿಮಾನ ನಿಲ್ದಾಣ ಆಗಮನ, 8- ಸಕ್ರ್ಯೂಟ್ ಹೌಸ್ನಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ, 10- ಉರ್ವಸ್ಟೋರ್ನಲ್ಲಿ ಡಿ ದೇವರಾಜ ಅರಸು ಭವನ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮ, ಇಂದಿರಾ ಗಾಂಧಿ ಮಹಿಳಾ ನರ್ಸಿಂಗ್ ವಿದ್ಯಾರ್ಥಿ ನಿಲಯ ನೂತನ ಕಟ್ಟಡ ಉದ್ಘಾಟನೆ, ಡಿ ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಶಿಲಾನ್ಯಾಸ , ಮಾದರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ಶಿಲಾನ್ಯಾಸ, 10:30 – ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜಿಲ್ಲೆಯ ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಗಳ ಸಮಾಲೋಚನಾ ಸಭೆ, ಮಧ್ಯಾಹ್ನ 12:30 – ಹಳೆ ಜಿಲ್ಲಾಧಿಕಾರಿ ಕಚೇರಿ ಆವರಣದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಶತಮಾನೋತ್ಸವ ಭವನಕ್ಕೆ ಭೇಟಿ, 3:15 – ಕಡಬ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಸಭೆ, ರಾತ್ರಿ 10:45 ಸಚಿವರು ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ.