ಜುಲೈ 26, ಸರಕಾರಿ ಲೇಡಿಗೋಶನ್ ಆಸ್ಪತ್ರೆ ಅವ್ಯವಸ್ಥೆ ಖಂಡಿಸಿ ಡಿವೈಎಫ್‍ಐ ಪ್ರತಿಭಟನೆ

Spread the love

ಜುಲೈ 26, ಸರಕಾರಿ ಲೇಡಿಗೋಶನ್ ಆಸ್ಪತ್ರೆ ಅವ್ಯವಸ್ಥೆ ಖಂಡಿಸಿ ಡಿವೈಎಫ್‍ಐ ಪ್ರತಿಭಟನೆ

ದ.ಕ. ಜಿಲ್ಲೆ ಸೇರಿ ಸುತ್ತಮುತ್ತಲ ಹಲವು ಜಿಲ್ಲೆಯ ಬಡವರಿಗಿರುವ ಏಕೈಕ ಸರಕಾರಿ ಆಸ್ಪತ್ರೆಯಾದ ಲೇಡಿಗೋಷನ್ ಕಳೆದ ಹಲವು ವರುಷಗಳಿಂದ ಸರಿಯಾದ ಮೂಲಭೂತ ಸೌಕರ್ಯಗಳಿಲ್ಲದೆ ಬಾಣಂತಿ ಮಹಿಳೆಯರು ಹಲವು ರೀತಿ ಗಂಭೀರ ಸಮಸ್ಯೆಗಳಿಗೊಳಗಾಗುತ್ತಿದ್ದಾರೆ.

ಆಸ್ಪತ್ರೆಯ ಹಳೆಯ ಕಟ್ಟಡ ಭಾಗಶಃ ಕೆಡವಿ ಹೊಸ ಕಟ್ಟಡ ನಿರ್ಮಿಸಲು ಹೊರಟು ಹಲವು ವರ್ಷಗಳಾದರೂ, ಗಡುವುಗಳೆಲ್ಲಾ ಮುಗಿದರೂ ಈವರೆಗೂ ಹೊಸ ಕಟ್ಟಡವನ್ನು ಸಂಪೂರ್ಣಗೊಳಿಸಿರುವುದಿಲ್ಲ. ಈಗ ಕಟ್ಟಡ ಕಾಮಗಾರಿ ಪೂರ್ಣಗೊಂಡರೂ ಬಾಣಂತಿ ಮಹಿಳೆಯರನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವ ಯಾವುದೇ ಪ್ರಕ್ರಿಯೆಯನ್ನು ಪ್ರಾರಂಭಿಸಿರುವುದಿಲ್ಲ. ಒಟ್ಟಾರೆಯಾಗಿ ಬಡವರಿಗಿರುವ ಏಕೈಕ ಸರಕಾರಿ ಆಸ್ಪತ್ರೆಯನ್ನು ಖಾಸಗೀ ಆಸ್ಪತ್ರೆಗಳ ಲಾಭಿಗೆ ಮಣಿದು ಸರಕಾರ, ಜನಪ್ರತಿನಿಧಿಗಳು ಸಂಪೂರ್ಣವಾಗಿ ಕಡೆಗಣಿಸಿರುತ್ತಾರೆ.

ಈ ಹಿನ್ನಲೆಯಲ್ಲಿ ಸರಕಾರದ ಜನಪ್ರತಿನಿಧಿಗಳ ಬೇಜವಬ್ದಾರಿಯನ್ನು ಖಂಡಿಸಿ, ಬಾಣಂತಿ ಮಹಿಳೆಯರಿಗೆ ಆಸ್ಪತ್ರೆಯಲ್ಲಿ ಆಗುತ್ತಿರುವ ಅನಾನುಕೂಲತೆಯನ್ನು ಸರಿಪಡಿಸಲು ಒತ್ತಾಯಿಸಿ ಹಾಗೂ ನೂತನ ಕಟ್ಟಡಕ್ಕೆ ಆಸ್ಪತ್ರೆ ಸ್ಥಳಾಂತರ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸಲು ಒತ್ತಾಯಿಸಿ ಡಿವೈಎಫ್‍ಐ ದ.ಕ. ಜಿಲ್ಲಾ ಸಮಿತಿಯು ತಾ. 26-7-2018ರಂದು ಲೇಡಿಗೋಶನ್ ಆಸ್ಪತ್ರೆ ಮುಂಭಾಗ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.

ಸಾರ್ವಜನಿಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಡಿವೈಎಫ್‍ಐ ದ.ಕ. ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


Spread the love