Home Mangalorean News Kannada News ಜುಲೈ 28: ಉಡುಪಿ ಜಿಲ್ಲೆಯಲ್ಲಿ ಮತ್ತೆ 109 ಮಂದಿಗೆ ಕೊರೋನಾ ಪಾಸಿಟಿವ್ ದೃಢ

ಜುಲೈ 28: ಉಡುಪಿ ಜಿಲ್ಲೆಯಲ್ಲಿ ಮತ್ತೆ 109 ಮಂದಿಗೆ ಕೊರೋನಾ ಪಾಸಿಟಿವ್ ದೃಢ

Spread the love

ಜುಲೈ 28: ಉಡುಪಿ ಜಿಲ್ಲೆಯಲ್ಲಿ ಮತ್ತೆ 109 ಮಂದಿಗೆ ಕೊರೋನಾ ಪಾಸಿಟಿವ್ ದೃಢ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಂಗಳವಾರ, ಒಟ್ಟು 109 ಮಂದಿಗೆ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 3722 ಕ್ಕೆ ಏರಿಕೆಯಾಗಿದೆ.

ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದ, ಶೀತಜ್ವರ, ಉಸಿರಾಟದ ಸಮಸ್ಯೆ ಇರುವ 926 ಜನರ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಮಂಗಳವಾರ 422 ವರದಿಗಳು ನೆಗೆಟಿವ್ ಬಂದಿದ್ದು, 109 ಪಾಸಿಟಿವ್ ಬಂದಿವೆ. 671 ವರದಿಗಳು ಬರುವುದು ಬಾಕಿ ಇದೆ.

ಮಂಗಳವಾರ ಸೋಂಕಿನ ಲಕ್ಷಣಗಳು ಕಂಡುಬಂದ 39 ಮಂದಿಗೆ ಐಸೊಲೇಷನ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಇದುವರೆಗೂ 2239 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 1461 ಸಕ್ರಿಯ ಪ್ರಕರಣಗಳು ಬಾಕಿ ಇವೆ.


Spread the love

Exit mobile version