ಜುಲೈ 30 : ಉಡುಪಿ ಜಿಲ್ಲೆಯಲ್ಲಿ ಮತ್ತೆ 248 ಮಂದಿಗೆ ಕೊರೋನಾ ಪಾಸಿಟಿವ್ ದೃಢ

Spread the love

ಜುಲೈ 30 : ಉಡುಪಿ ಜಿಲ್ಲೆಯಲ್ಲಿ ಮತ್ತೆ 248 ಮಂದಿಗೆ ಕೊರೋನಾ ಪಾಸಿಟಿವ್ ದೃಢ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಗುರುವಾರ ಕೋರೋನಾ ಸೋಂಕಿತರ ಸಂಖ್ಯೆ ನಾಲ್ಕು ಸಾವಿರದ ಗಡಿ ಡಾಟಿದ್ದು, ಒಟ್ಟು 248 ಮಂದಿಗೆ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 4143 ಕ್ಕೆ ಏರಿಕೆಯಾಗಿದೆ.

ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದ, ಶೀತಜ್ವರ, ಉಸಿರಾಟದ ಸಮಸ್ಯೆ ಇರುವ 784 ಜನರ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಗುರುವಾರ 487 ವರದಿಗಳು ನೆಗೆಟಿವ್ ಬಂದಿದ್ದು, 248 ಪಾಸಿಟಿವ್ ಬಂದಿವೆ. 609 ವರದಿಗಳು ಬರುವುದು ಬಾಕಿ ಇದೆ.

ಗುರುವಾರ ಸೋಂಕಿನ ಲಕ್ಷಣಗಳು ಕಂಡುಬಂದ 47 ಮಂದಿಗೆ ಐಸೊಲೇಷನ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಇದುವರೆಗೂ 2445 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 1669- ಸಕ್ರಿಯ ಪ್ರಕರಣಗಳು ಬಾಕಿ ಇವೆ.


Spread the love