ಜುಲೈ 31 : ಉಡುಪಿ ಜಿಲ್ಲೆಯಲ್ಲಿ ಮತ್ತೆ 213 ಮಂದಿಗೆ ಕೊರೋನಾ ಪಾಸಿಟಿವ್ ದೃಢ

Spread the love

ಜುಲೈ 31 : ಉಡುಪಿ ಜಿಲ್ಲೆಯಲ್ಲಿ ಮತ್ತೆ 213 ಮಂದಿಗೆ ಕೊರೋನಾ ಪಾಸಿಟಿವ್ ದೃಢ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ಒಟ್ಟು 213 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 4356 ಕ್ಕೆ ಏರಿಕೆಯಾಗಿದೆ.

ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದ, ಶೀತಜ್ವರ, ಉಸಿರಾಟದ ಸಮಸ್ಯೆ ಇರುವ 621 ಜನರ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಶುಕ್ರವಾರ 455 ವರದಿಗಳು ನೆಗೆಟಿವ್ ಬಂದಿದ್ದು, 213 ಪಾಸಿಟಿವ್ ಬಂದಿವೆ. 562 ವರದಿಗಳು ಬರುವುದು ಬಾಕಿ ಇದೆ.

ಶುಕ್ರವಾರ ಸೋಂಕಿನ ಲಕ್ಷಣಗಳು ಕಂಡುಬಂದ 40 ಮಂದಿಗೆ ಐಸೊಲೇಷನ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಇದುವರೆಗೂ 2522 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 1805 ಸಕ್ರಿಯ ಪ್ರಕರಣಗಳು ಬಾಕಿ ಇವೆ.


Spread the love