Home Mangalorean News Kannada News ಜುಲೈ 8,9 ರಂದು ಗೃಹ ಸಚಿವ ದಕ ಜಿಲ್ಲಾ ಪ್ರವಾಸ

ಜುಲೈ 8,9 ರಂದು ಗೃಹ ಸಚಿವ ದಕ ಜಿಲ್ಲಾ ಪ್ರವಾಸ

Spread the love

ಜುಲೈ 8,9 ರಂದು ಗೃಹ ಸಚಿವ ದಕ ಜಿಲ್ಲಾ ಪ್ರವಾಸ

ಮಂಗಳೂರು: ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಜುಲೈ 8 ಮತ್ತು 9 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಜುಲೈ 8 ರಂದು ಬೆಳಿಗ್ಗೆ 6:30 – ಮಂಗಳೂರು ವಿಮಾನ ನಿಲ್ದಾಣ ಆಗಮನ, ವಾಸ್ತವ್ಯ, ಜುಲೈ 9 ರಂದು ಮಧ್ಯಾಹ್ನ 12 ರಿಂದ 3 ರವರೆಗೆ – ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲೆಯ ಶಾಂತಿ ಸೌಹಾರ್ದತೆಯನ್ನು ಕಾಪಾಡುವ ಹಿತ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ರಾಜಕೀಯ ಪಕ್ಷದ ಮುಖಂಡರು, ವಿವಿಧ ಸಂಘ ಸಂಸ್ಥೆಗಳ (ಶಿಕ್ಷಣ ಮತ್ತು ಧಾರ್ಮಿಕ) ಪ್ರತಿನಿಧಿಗಳು ಹಾಗೂ ಎಲ್ಲಾ ಸಮುದಾಯದ ಮುಖಂಡರುಗಳೊಂದಿಗೆ ಆಯೋಜಿಸಿರುವ ಸಭೆಯಲ್ಲಿ ಸಚಿವರು ಭಾಗವಹಿಸಲಿದ್ದಾರೆ.

ಗೃಹ ಸಚಿವರ ಅಧ್ಯಕ್ಷತೆಯಲ್ಲಿ ನಾಳೆ ಸಭೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಜುಲೈ 9 ರಂದು ಮಧ್ಯಾಹ್ನ 12 ಗಂಟೆಗೆ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರ ಘನ ಉಪಸ್ಥಿತಿಯಲ್ಲಿ, ಗೃಹ ಸಚಿವ ಡಾ.ಜಿ.ಪರಮೇಶ್ವರ ಅಧ್ಯಕ್ಷತೆಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉಪಸ್ಥಿತಿಯಲ್ಲಿ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಎಲ್ಲಾ ರಾಜಕೀಯ ಪಕ್ಷದ ಮುಖಂಡರು, ವಿವಿಧ ಸಂಘ ಸಂಸ್ಥೆಗಳು/ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು, ಎಲ್ಲಾ ಧಾರ್ಮಿಕ ಸಂಸ್ಥೆಗಳ ಹಾಗೂ ಎಲ್ಲಾ ಸಮುದಾಯದ ಮುಖಂಡರುಗಳೊಂದಿಗೆ ಸಭೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣ ಆಯೋಜಿಸಲಾಗಿದೆ.


Spread the love

Exit mobile version