ಜು.23ರಂದು ಕುಂದಾಪುರದಲ್ಲಿ ಪತ್ರಿಕಾ ದಿನಾಚರಣೆ, ಡೈರಕ್ಟರಿ ಬಿಡುಗಡೆ
ಕುಂದಾಪುರ: ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಪತ್ರಿಕಾ ದಿನಾಚರಣೆ ಹಾಗೂ ಸಂಘದ ಅಧೀಕೃತ ಸದಸ್ಯರ ಡೈರಕ್ಟರಿ ಬಿಡುಗಡೆ ಸಮಾರಂಭವು ಜು.23ರಂದು ಬೆಳಿಗ್ಗೆ 11 ಗಂಟೆಗೆ ಭಂಡಾರ್ಕಾರ್ಸ್ ಕಾಲೇಜಿನ ರಾಧಾಬಾಯಿ ಹಾಲ್ ನಲ್ಲಿ ಜರುಗಲಿದೆ.
ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನಮಠ ಅಧ್ಯಕ್ಷತೆ ವಹಿಸಲಿದ್ದು, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಇವರು ಕಾರ್ಯಕ್ರಮ ಉದ್ಘಾಟಸಲಿದ್ದಾರೆ. ಕುಂದಾಪುರ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್ ಅವರು ಸಂಘದ ಅಧೀಕೃತ ಸದಸ್ಯರ ಡೈರಕ್ಟರಿಯನ್ನು ಬಿಡುಗಡೆಗೊಳಿಸಲಿದ್ದಾರೆ. ಕೋಟ ಗೀತಾನಂದ ಫೌಂಡಶೇನ್ ನ ಪ್ರವರ್ತಕ ಆನಂದ ಸಿ ಕುಂದರ್ ಇವರು ಸಾಧಕ ಪತ್ರಕರ್ತರನ್ನು ಸನ್ಮಾನಿಸಲಿದ್ದಾರೆ.
ಕುಂದಾಪುರ ತಹಶೀಲ್ದಾರ್ ಪ್ರದೀಪ್ ಕುರುಡೇಕರ್, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಉಪಾಧ್ಯಕ್ಷ ವಿನಯ ಪಾಯಸ್, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರ ಅಚಾರ್ಯ, ಡಾ.ಜಿ.ಎಮ್.ಗೊಂಡ ಭಾಗವಹಿಸಲಿದ್ದಾರೆ.
ಈ ಸಂದರ್ಭ ಸಾಧಕ ಪತ್ರಕರ್ತರಾದ ಯು.ಎಸ್.ಶೆಣೈ ಮತ್ತು ಡಾ.ಉದಯ ಕುಮಾರ್ ತಲ್ಲೂರು
ಇವರಿಗೆ ಪತ್ರಿಕೋದ್ಯಮದ ಗೌರವಾರ್ಪಣೆ ಸಲ್ಲಿಸಲಾಗುತ್ತದೆ ಎಂದು ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನಮಠ ಹಾಗೂ ಪ್ರಧಾನ ಕಾರ್ಯದರ್ಶಿ ಗಣೇಶ್ ಎಸ್ ಬೀಜಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.