ಜೂ. 13: ವಿಶೇಷ ಕಾರ್ಯಪಡೆ ಘಟಕ, ನಗರ ಪೊಲೀಸ್ ನೂತನ ವಸತಿಗೃಹ ಉದ್ಘಾಟನೆ
ಮಂಗಳೂರು: ವಿಶೇಷ ಕಾರ್ಯಪಡೆ ಘಟಕದ ಉದ್ಘಾಟನೆ ಹಾಗೂ ಮಂಗಳೂರು ನಗರ ಪೊಲೀಸ್ ನೂತನ ವಸತಿ ಗೃಹದ ಉದ್ಘಾಟನೆ ಜೂನ್ 13 ರಂದು ನಡೆಯಲಿದೆ.
ವಿಶೇಷ ಕಾರ್ಯಪಡೆ ಘಟಕದ ಉದ್ಘಾಟನಾ ಸಮಾರಂಭ ಜೂನ್ 13 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಲಿದೆ. ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಫರೀದ್ ಘನ ಉಪಸ್ಥಿತಿಯಲ್ಲಿ, ಗೃಹ ಸಚಿವ ಡಾ. ಜಿ ಪರಮೇಶ್ವರ ಉದ್ಘಾಟಿಸಲಿದ್ದಾರೆ.
ಬಳಿಕ ಮಂಗಳೂರು ನಗರ ಪೊಲೀಸ್ ನೂತನ ವಸತಿಗೃಹ ಉದ್ಘಾಟನಾ ಸಮಾರಂಭ ಬೆಳಿಗ್ಗೆ 9:15 ಗಂಟೆಗೆ ಅತ್ತಾವರ ಪೊಲೀಸ್ ಲೇನ್ನಲ್ಲಿ ನಡೆಯಲಿದೆ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗೌರವ ಉಪಸ್ಥಿತಿಯಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ