ಟೆಂಪೋ -ಬೈಕ್ ಮುಖಾಮುಖಿ ಢಿಕ್ಕಿ: ಸವಾರ ಮೃತ್ಯು

Spread the love

ಟೆಂಪೋ -ಬೈಕ್ ಮುಖಾಮುಖಿ ಢಿಕ್ಕಿ: ಸವಾರ ಮೃತ್ಯು

ಮಣಿಪಾಲ: ಬೈಕ್ ಮತ್ತು ಟೆಂಪೋ ಮಧ್ಯೆ ಮಣಿಪಾಲ ಅತ್ರಾಡಿಯ ಕಬ್ಯಾಡಿ ಅರ್ಮನ್ ರಟ್ ಫ್ಯಾಕ್ಟರಿ ಬಳಿ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತರನ್ನು ಹೆರ್ಗ ಗ್ರಾಮದ ಭಾಸ್ಕರ ನಾಯಕ್(70) ಎಂದು ಗುರುತಿಸಲಾಗಿದೆ. ಆತ್ರಾಡಿಯಿಂದ ಮೂಡುಬೆಳ್ಳೆ ಕಡೆಗೆ ಹೋಗುತ್ತಿದ್ದ 407 ಟೆಂಪೋ ಎದುರಿನಲ್ಲಿ ಬರುತ್ತಿದ್ದ ಬೈಕ್ಗೆ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಇದರಿಂದ ಬೈಕಿನಲ್ಲಿದ್ದ ಇಬ್ಬರು ಸವಾರರು ಬೈಕ್ ಸಮೇತ ರಸ್ತೆಗೆ ಬಿದ್ದರು. ಇದರಲ್ಲಿ ಗಂಭೀರವಾಗಿ ಗಾಯಗೊಂಡ ಭಾಸ್ಕರ ನಾಯಕ್ ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದುಬಂದಿದೆ.

ಬೈಕಿನ ಹಿಂಬದಿ ಸವಾರನ ಕಾಲು ತುಂಡಾಗಿದ್ದು, ತೀವ್ರವಾಗಿ ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments