ಡಿಕೆಶಿ ಪದಗ್ರಹಣ : ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನ   ಗ್ರಾಪಂ ವ್ಯಾಪ್ತಿಯ ಪೂರ್ವಭಾವಿ ಸಭೆ

Spread the love

ಡಿಕೆಶಿ ಪದಗ್ರಹಣ : ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನ   ಗ್ರಾಪಂ ವ್ಯಾಪ್ತಿಯ ಪೂರ್ವಭಾವಿ ಸಭೆ

ಉಡುಪಿ: ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪ್ರತಿಜ್ಞಾವಿಧಿ ಕಾರ್ಯಕ್ರಮವು ಪ್ರತಿಯೊಬ್ಬ ಕಾಂಗ್ರೆಸ್ಸಿಗರ ಪದಗ್ರಹಣ ಕಾರ್ಯಕ್ರಮವಾಗಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ತಿಳಿಸಿದರು.

ಅವರು ಕೆಮ್ಮಣ್ಣು ಗ್ರಾಮ ಪಂಚಾಯತ್ ವ್ಯಾಪ್ತಿಯ ಪೂರ್ವಬಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮದ ವಿವರ ನೀಡಿದರು

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಹಾಗೂ ಬ್ರಹ್ಮಾವರ ಬ್ಲಾಕ್ ಉಸ್ತುವಾರಿ ಪ್ರಖ್ಯಾತ್ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ವಕ್ತಾರ ಭಾಸ್ಕರ್ ರಾವ್ ಕಿದಿಯೂರು, ಮುಖಂಡರಾದ ವೆರೋನಿಕಾ ಕರ್ನೆಲಿಯೋ, ರೆಹಮುತುಲ್ಲಾ, ರಘುರಾಮ ಶೆಟ್ಟಿ, ನಿತ್ಯಾನಂದ ಕೆಮ್ಮಣ್ಣು ಹಾಗೂ ಇತರರು ಉಪಸ್ಥಿತರಿದ್ದರು.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಬ್ರಹ್ಮಾವರ ಬ್ಲಾಕ್ ನ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯಿತು.


Spread the love