ಡಿಕೆಶಿ ಮನೆಯ ಮೇಲೆ ಸಿಬಿಐ ದಾಳಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಖಂಡನೆ, ಮಂಗಳವಾರ ಪ್ರತಿಭಟನೆ

Spread the love

ಡಿಕೆಶಿ ಮನೆಯ ಮೇಲೆ ಸಿಬಿಐ ದಾಳಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಖಂಡನೆ, ಮಂಗಳವಾರ ಪ್ರತಿಭಟನೆ

ಉಡುಪಿ:  ಜಿಲ್ಲಾ ಕಾಂಗ್ರೆಸ್ ಸಮಿತಿಯು ಕಾಂಗ್ರೆಸ್ ಭವನದಲ್ಲಿ ತುರ್ತು ಸಭೆ ನಡೆಸಿ ಕೆ.ಪಿ.ಸಿ.ಸಿ. ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ರವರ ಮನೆಯ ಮೇಲೆ ನಡೆದ ಸಿಬಿಐ ದಾಳಿಯನ್ನು ತೀವ್ರವಾಗಿ ಖಂಡಿಸಲಾಯಿತು.

ಇದೊಂದು ರಾಜಕೀಯ ಪ್ರೇರಿತ ದಾಳಿಯಾಗಿದ್ದು ಕೇಂದ್ರ ಸರಕಾರ ಸಿಬಿಐ ಸಂಸ್ಥೆಯನ್ನು ದುರುಪಯೋಗ ಪಡಿಸಿಕೊಂಡಿರುವುದು ಇದರಿಂದ ಸಾಬೀತಾಗಿದೆ. ಈ ಹಿನ್ನಲೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮತ್ತು ಯುವ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ವಿದ್ಯಾರ್ಥಿ ಘಟಕ ಸಂಘಟನೆಗಳೊಂದಿಗೆ ಅಕ್ಟೋಬರ್ 6ರಂದು ಬೆಳಿಗ್ಗೆ 10.30ಕ್ಕೆ ಉಡುಪಿಯಲ್ಲಿ ತೀವ್ರ ಪ್ರತಿಭಟನೆಯನ್ನು ಹಮ್ಮಿಕೊಳ್ಳುವುದೆಂದು ನಿರ್ಧರಿಸಲಾಯಿತು.

ಸಭೆಯಲ್ಲಿ ಪಕ್ಷದ ಮುಖಂಡರಾದ ಕುಶಲ್ ಶೆಟ್ಟಿ, ಪ್ರಖ್ಯಾತ್ ಶೆಟ್ಟಿ, ಭಾಸ್ಕರ್ ರಾವ್ ಕಿದಿಯೂರು, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಕೀರ್ತಿ ಶೆಟ್ಟಿ, ಬಿ. ನರಸಿಂಹ ಮೂರ್ತಿ, ಜನಾರ್ದನ ಭಂಡಾರ್ಕಾರ್, ರಮೇಶ್ ಕಾಂಚನ್, ಕೃಷ್ಣಮೂರ್ತಿ ಆಚಾರ್ಯ, ಯತೀಶ್ ಕರ್ಕೇರಾ, ರೋಶನಿ ಒಲಿವರ್, ಹಮದ್, ಉಪೇಂದ್ರ ಮೆಂಡನ್, ದನುಷ್ ಶೆಟ್ಟಿ, ಅಬ್ದುಲ್ ರೆಹಮಾನ್ ಮೊದಲಾದವರು ಉಪಸ್ಥಿತರಿದ್ದರು.


Spread the love