Home Mangalorean News Kannada News ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ; ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ, ಬಂಧನ

ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ; ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ, ಬಂಧನ

Spread the love

ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ; ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ, ಬಂಧನ

ಉಡುಪಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಮನೆ ಹಾಗೂ ಕಚೇರಿಗಳ ಮೇಲೆ ನಡೆದಿರುವ ಸಿಬಿಐ ದಾಳಿಯನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಉಡುಪಿಯಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಬ್ರಹ್ಮಗಿರಿ ಕಾಂಗ್ರೆಸ್ ಭವನದಿಂದ ಅಜ್ಜರಕಾಡು ಹುತಾತ್ಮ ಸ್ಮಾರಕದ ವರೆಗೆ ಮೆರವಣಿಗೆಯಲ್ಲಿ ಸಾಗಿದ ಕಾಂಗ್ರೆಸ್ ಕಾರ್ಯಕರ್ತರು ಅಜ್ಜರಕಾಡು ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿ ಬಿಜೆಪಿ ಸರಕಾರದ ವಿರುದ್ದ ಆಕ್ರೋಶ ಆಕ್ರೋಶ ವ್ಯಕ್ತಪಡಿಸಿ ಬಿಜೆಪಿ ಸರಕಾರದ ವಿರುದ್ದ ಘೋಷಣೆಗಳನ್ನು ಕೂಗಿದರು. ಬಳಿಕ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಪ್ರತಿಭಟನಾಕಾರರನ್ನು ಬಂಧಿಸಿದರು.

ಪ್ರತಿಭಟನೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಕಾಂಗ್ರೆಸ್ ನಾಯಕರಾದ ಕಿಶನ್ ಹೆಗ್ಡೆ, ಹರೀಶ್ ಕಿಣಿ, ರಮೇಶ್ ಕಾಂಚನ್, ಯತೀಶ್ ಕರ್ಕೇರಾ, ಮುರಳಿ ಶೆಟ್ಟಿ, ಪ್ರಭಾಕರ ಆಚಾರ್ಯ, ಗೀತಾ ವಾಗ್ಲೆ, ವೆರೋನಿಕಾ ಕರ್ನೆಲಿಯೊ, ಜ್ಯೋತಿ ಹೆಬ್ಬಾರ್, ಮೇರಿ ಡಿಸೋಜಾ, ರೋಶನಿ ಒಲಿವರ್, ಕಿಶನ್ ಹೆಗ್ಡೆ ಕೊಳಕೆಬೈಲು, ನವೀನ್ ಚಂದ್ರ ಶೆಟ್ಟಿ, ಸಂಜಯ್ ಆಚಾರ್ಯ ಹಾಗೂ ಇತರರು ಉಪಸ್ಥಿತರಿದ್ದರು.


Spread the love

Exit mobile version