Home Mangalorean News Kannada News ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ; ದಕ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ; ದಕ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

Spread the love

ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ; ದಕ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಮನೆ ಹಾಗೂ ಕಚೇರಿಗಳ ಮೇಲೆ ನಡೆದಿರುವ ಸಿಬಿಐ ದಾಳಿಯನ್ನು ಖಂಡಿಸಿ ದಕ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಮಲ್ಲಿಕಟ್ಟೆಯಲ್ಲಿರುವ ದಕ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ಮಧ್ಯೆ ಟಯರ್ ಗಳನ್ನು ಉರಿಸಿ ಆಕ್ರೋಶ ವ್ಯಕ್ತಪಡಿಸಿ ಬಿಜೆಪಿ ಸರಕಾರದ ವಿರುದ್ದ ಘೋಷಣೆಗಳನ್ನು ಕೂಗಿದರು.

ಪ್ರತಿಭಟನೆಯ ವೇಳೆ ಕೋವಿಡ್ -19 ನಿಯಮಾವಳಿ ಉಲ್ಲಂಘಿಸಿದ ಆರೋಪದ ಮೇಲೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.


Spread the love

Exit mobile version