ಡಿ. 13–14: ಮಂಗಳೂರಿನಲ್ಲಿ ಜಿಲ್ಲಾ ಮಟ್ಟದ ವಕೀಲರ ಕ್ರೀಡಾಕೂಟ; ಸಿಎಂ ಸಿದ್ದರಾಮಯ್ಯರಿಂದ ಪೋಸ್ಟರ್ ಬಿಡುಗಡೆ
ಮಂಗಳೂರು ವಕೀಲರ ಸಂಘದ ವತಿಯಿಂದ ಡಿಸೆಂಬರ್ 13 ಮತ್ತು 14 ರಂದು ಜಿಲ್ಲೆಯ ವಕೀಲರ ಜಿಲ್ಲಾ ಮಟ್ಟದ ಕ್ರಿಕೆಟ್ ಹಾಗೂ ಥ್ರೋ ಬಾಲ್ ಪಂದ್ಯಾಟಗಳನ್ನು ಆಯೋಜಿಸಲಾಗಿದೆ. ಈ ಕ್ರೀಡಾಕೂಟದ ಪೋಸ್ಟರ್ ಅನ್ನು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿ ಸ್ಪರ್ಧೆಗೆ ಶುಭ ಹಾರೈಸಿದ್ದಾರೆ.
ಪಣಂಬೂರು ಎನ್ಎಂಪಿಟಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ವಕೀಲರ ಸಂಘಗಳ ತಂಡಗಳು ಭಾಗವಹಿಸಲಿವೆ.
ಪೋಸ್ಟರ್ ಬಿಡುಗಡೆ ಸಮಾರಂಭದಲ್ಲಿ ಮಂಗಳೂರು ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ಎಚ್. ವಿ., ಪ್ರಧಾನ ಸರಕಾರಿ ಅಭಿಯೋಜಕರಾದ ಎಂ.ಪಿ. ನರೋನ್ಹ, ಟಿ.ಎನ್. ಪೂಜಾರಿ, ಎಂ.ಆರ್. ಬಲ್ಲಾಳ್, ಯಶವಂತ ಮರೋಳಿ, ಸಂಘದ ಉಪಾಧ್ಯಕ್ಷ ಸುಜಿತ್ ಕುಮಾರ್, ಪ್ರಧಾನ ಕಾರ್ಯದರ್ಶಿ ಶ್ರೀಧರ್ ಎಚ್., ಜೊತೆಯ ಕಾರ್ಯದರ್ಶಿ ಜ್ಯೋತಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಿಚರ್ಡ್ ಡಿಕೋಸ್ಟ, ಪುತ್ತೂರು ಸಂಘದ ಅಧ್ಯಕ್ಷ ಜಗನ್ನಾಥ ರೈ, ಮೂಡುಬಿದ್ರೆ ಸಂಘದ ಅಧ್ಯಕ್ಷ ಹರೀಶ್ ಕುಮಾರ್, ಸಮನಾ ಶರಣ್, ಶಾಲಿನಿ ಹಾಗೂ ಕರಾವಳಿ ಭಾಗದ ಅನೇಕ ವಕೀಲರ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
