ಡಿ. 20: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ
ಉಡುಪಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶಾಲಾ ಹಳೆ ವಿದ್ಯಾರ್ಥಿ ಸಂಘ ಬೆಳ್ಕಳೆ, ಲಕ್ಷ್ಮೀನಗರ ಇದರ ಸಂಯುಕ್ತ ವಾರ್ಷಿಕೋತ್ಸವ ಡಿಸೆಂಬರ್ 20 ರಂದು ಶನಿವಾರ ಜರುಗಲಿದೆ
ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ, ಬಹುಮಾನ ವಿತರಣೆ, ಸಿಹಿತಿಂಡಿ ವಿತರಣೆ ಹಾಗೂ ಛದ್ಮವೇಷ ಸ್ಪರ್ಧೆ ಜರುಗಲಿದ್ದು, ಸಂಜೆ 5.30 ರಿಂದ ಮನೋರಂಜನಾ ಕಾರ್ಯಕ್ರಮ ಆಯೋಜಿಸಿದ್ದು ಅಂಗನವಾಡಿ ಪುಟಾಣಿಗಳು, ಶಾಲಾ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ.
ರಾತ್ರಿ 7.30 ಕ್ಕೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶಪಾಲ್ ಎ ಸುವರ್ಣ ಅವರ ಅಧ್ಯಕ್ಷತೆಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ರಘುಪತಿ ಭಟ್, ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್, ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಅರುಣ್ ಕುಮಾರ್ ಗರ್ಡೆ, ಸ್ಥಳೀಯ ಉದ್ಯಮಿಗಳು ಹಾಗೂ ಗಣ್ಯಾತಿಗಣ್ಯರ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ಜರುಗಲಿದೆ.
ರಾತ್ರಿ 8.30 ರಿಂದ ಶಾರದಾ ಆರ್ಟ್ಸ್ ಕಲಾವಿದರು ಮಂಜೇಶ್ವರ ಇವರಿಂದ ಕಥೆ ಎಡ್ಡೆಂಡು ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.













