ಡಿ. 30 : ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಉಡುಪಿ ಪ್ರವಾಸ

Spread the love

ಡಿ. 30 : ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಉಡುಪಿ ಪ್ರವಾಸ

ಉಡುಪಿ: ರಾಜ್ಯದ ಗೃಹ ಹಾಗೂ ಸಹಕಾರ ಸಚಿವ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಡಿ. 30 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಅಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಖನಿಜ ಪ್ರತಿಷ್ಟಾನ ಟ್ರಸ್ಟ್ನ ಸಭೆ, 11 ಕ್ಕೆ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಜಿಲ್ಲಾ ಕೆ.ಡಿ.ಪಿ ಸಭೆ, ಮ. 4 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಕಾರ್ಯಕ್ರಮ ಕುರಿತು ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ, ಸಂಜೆ 5 ಗಂಟೆಗೆ ಹೋಟೆಲ್ ಕಿದಿಯೂರು ಶೇಷಶಯನ ಸಭಾಭವನದಲ್ಲಿ ಭಾರತೀಯ ಜನತಾ ಪಕ್ಷ, ಉಡುಪಿ ನಗರದ ಜಿಲ್ಲಾ ಅಧ್ಯಕ್ಷರ ಮತ್ತು ಇತರ ಪದಾಧಿಕಾರಿಗಳ ಸಂಕಲ್ಪ ಸಮಾವೇಶ ಸಮಾರಂಭದಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ತೆರಳುವರು.


Spread the love